Dailyhunt Logo
  • Light mode
    Follow system
    Dark mode
    • Play Story
    • App Story
BREAKING : ಚಿಕ್ಕಬಳ್ಳಾಪುರದಲ್ಲಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಕತ್ತು ಕೊಯ್ಯಲು ಯತ್ನ.!

BREAKING : ಚಿಕ್ಕಬಳ್ಳಾಪುರದಲ್ಲಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಕತ್ತು ಕೊಯ್ಯಲು ಯತ್ನ.!

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪೊಂದು ವಿದ್ಯಾರ್ಥಿನಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿ, ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪು ಮನೆಗೆ ನುಗ್ಗಿ ದಾಂಧಲೆ ನಡೆಸಿ, ಕಲ್ಲು ತೂರಾಟ ಮಾಡಿ, ವಿದ್ಯಾರ್ಥಿನಿ ಮೇಘನಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ.

ಗಾಯಗೊಂಡ ವಿದ್ಯಾರ್ಥಿನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಾಹಿತಿಯ ಪ್ರಕಾರ, ವಿದ್ಯಾರ್ಥಿನಿ ಮೇಘನಾ ತನ್ನ ತಂಗಿಯೊಂದಿಗೆ ಹೋಗುತ್ತಿದ್ದ ವೇಳೆ ಕೆಲ ಯುವಕರು ಚುಡಾಯಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಮೇಘನಾ ಆಕ್ಷೇಪ ವ್ಯಕ್ತಪಡಿಸಿ, ಒಬ್ಬ ಯುವಕನಿಗೆ ಕಪಾಳಕ್ಕೆ ಹೊಡೆದಿದ್ದಾಳೆ ಎಂದು ಹೇಳಲಾಗಿದೆ.

ಇದರಿಂದ ಕೆರಳಿದ ಯುವಕರ ಗುಂಪು ಬಳಿಕ ಮೇಘನಾ ಮನೆಗೆ ತೆರಳಿ ಗಲಾಟೆ ನಡೆಸಿದೆ. ಮನೆ ಮೇಲೆ ಕಲ್ಲು ತೂರಾಟ ನಡೆಸಿ, ದಾಂಧಲೆ ಸೃಷ್ಟಿಸಿದ ಪುಂಡರು ಮೇಘನಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಮನೆಗೆ ನುಗ್ಗಿದ ಪುಂಡರು ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿ ಕತ್ತು ಕೊಯ್ಯಲು ಕೂಡ ಯತ್ನಿಸಿದ್ದು, ಕೂಡಲೇ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡ ಮೇಘನಾಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ವೇಳೆ ಮನೆಯಲ್ಲಿದ್ದ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಹಲ್ಲೆ ನಡೆಸಿದ ಯುವಕರು ಅದೇ ಊರಿನ ನಿವಾಸಿಗಳಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia