Dailyhunt Logo
  • Light mode
    Follow system
    Dark mode
    • Play Story
    • App Story
BREAKING : ಧಾರವಾಡದಲ್ಲಿ ಘೋರ ದುರಂತ : ಪತ್ನಿಗೆ ಚಾಕು ಇರಿದು ಕೊಂದು ಪತಿ ನೇಣಿಗೆ ಶರಣು

BREAKING : ಧಾರವಾಡದಲ್ಲಿ ಘೋರ ದುರಂತ : ಪತ್ನಿಗೆ ಚಾಕು ಇರಿದು ಕೊಂದು ಪತಿ ನೇಣಿಗೆ ಶರಣು

ಧಾರವಾಡ : ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತಿ-ಪತ್ನಿ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಗರಗ್ ಗ್ರಾಮದಲ್ಲಿ ನಡೆದಿದೆ.

ಮೃತ ಪತ್ನಿಯನ್ನು ಸಲ್ಮಾ (22) ಎಂದು ಗುರುತಿಸಲಾಗಿದೆ.

ಪತಿ ಮೌಲಾಸಾಬ್ (28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿನ್ನೆ ಪತಿ ಹಾಗೂ ಪತ್ನಿ ನಡುವೆ ಅನೈತಿಕ ಸಂಬಂಧದ ಶಂಕೆ ವಿಚಾರವಾಗಿ ಗಲಾಟೆ ನಡೆದಿತ್ತು ಎನ್ನಲಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿದ ವೇಳೆ ಮೌಲಾಸಾಬ್ ಚಾಕುವಿನಿಂದ ಸಲ್ಮಾಗೆ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಆತ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia