ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಗರದ ಸಿದ್ದೇಶ್ವರ ಪಾರ್ಕ್ ಬಳಿ ನಡೆದ ಈ ಕೃತ್ಯದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕನ ಮೇಲೆ ದಾಳಿ
ಮಟಮಟ ಮಧ್ಯಾಹ್ನ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಯುವಕ ತಪ್ಪಿಸಿಕೊಳ್ಳಲು ಯತ್ನಿಸಿದರೂ ಬಿಡದ ಆರೋಪಿಗಳು ಸಾಯುವವರೆಗೂ ಕೊಚ್ಚಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಕೊಲೆಯಾದ ವ್ಯಕ್ತಿ ಯಾರು?
ಸದ್ಯ ಕೊಲೆಯಾದ ಯುವಕನ ಗುರುತು ಹಾಗೂ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾಕಿಷ್ಟು ದ್ವೇಷ? ಹತ್ಯೆಗೆ ಕಾರಣವೇನು? ಎಂಬ ಪ್ರಶ್ನೆಗಳು ಇದೀಗ ಮೂಡಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದು, ಹಾಡಹಗಲೇ ನಡೆದ ಈ ಕೃತ್ಯದಿಂದ ಪೊಲೀಸರ ಭಯವೇ ಇಲ್ಲವೇ? ಎಂಬ ಆತಂಕವೂ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ.

