ಚಾಮರಾಜನಗರ: ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿತ್ತ ಸೈಕೋಪಾತ್ ನನ್ನು ಚಾಮರಾಜನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಮೃತ್ ಆಚಾರ್ಯ ಎಂದು ಗುರುತಿಸಲಾಗಿದೆ. ಚಾಮರಾಜನಗರದ ಹೌಸಿಂಗ್ ಬೋರ್ಡ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ರಾತ್ರಿ ವೇಳೆ ಮಹಿಳೆಯರ ಉಡುಪು ಧರಿಸಿ ಮನೆಗೆ ನುಗ್ಗಿ ಮಹಿಳೆಯರ ಒಳ ಉಡುಪುಗಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದ.
ಸದ್ಯ ಹೌಸಿಂಗ್ ಬೋರ್ಡ್ ನಿವಾಸಿಯೇ ಆಗಿರುವ ಅಮೃತ್ ಆಚಾರ್ಯ ನನ್ನು ಪೊಲೀಸರು ಬಂಧಿಸಿದ್ದಾರೆ.
ಅಮೃತ್ ಆಚಾರ್ಯ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ೧೦ನೇ ತರಗತಿಯಲ್ಲಿಯೇ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ. ಕುಟುಂಬದವರು ಆತನಿಗೆ ದೆವ್ವ ಹಿಡಿದಿದೆ ಎಂದು ಕೇರಳಕ್ಕೆ ಕರೆದೊಯ್ದು ಪೂಜೆ ಮಾಡಿಸಿದ್ದರು. ಆದಾಗ್ಯೂ ವಿಲಕ್ಷಣ ವರ್ತನೆ ಮುಂದುವರೆಸಿದ್ದ.
ರಾತ್ರಿ ವೇಳೆ ಎಲ್ಲರೂ ಮಲಗಿದ ಬಳಿಕ ಮನೆಯಿಂದ ಹೊರ ಹೋಗುತ್ತಿದ. ಬಳಿಕ ಮನೆಗಳಿಗೆ ತೆರಳಿ ಒಣ ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ. ಸಫ಼್ಯ ಆರೋಪಿ ಅಮೃತ್ ಗೆ ಮನೋವೈದ್ಯಕೀಯ ತಪಾಸಣೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಾಮರಾಜನಗರ ಟೆಸ್ ಪಿ ಮುತ್ತುರಾಜ್ ಮಾಹಿತಿ ನೀಡಿದ್ದಾರೆ.

