ಬೆಂಗಳೂರು: ಮಹಿರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಾಗೇಂದ್ರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು, ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ರವಾನಿಸಿದ್ದಾರೆ.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.
ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಅಕ್ರಮ ನಡೆದಿರುವ ಆರೋಪ ಹಿನ್ನೆಲೆಯಲ್ಲಿ ವಿಪಕ್ಷ ಬಿಜೆಪಿ ನಾಯಕರು ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಸದನದ ಒಳಗೂ ಹೊರಗು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಘೋಷಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

