Wednesday, 02 Dec, 9.56 am ಕನ್ನಡದುನಿಯಾ

ಹೋಮ್
BREAKING NEWS: 24 ಗಂಟೆಯಲ್ಲಿ 501 ಸೋಂಕಿತರು ಕೋವಿಡ್ ಗೆ ಬಲಿ - ಒಂದೇ ದಿನದಲ್ಲಿ 36 ಸಾವಿರಕ್ಕೂ ಅಧಿಕ ಕೇಸ್ ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 36,604 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 94,99,414ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 501 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,381,22ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,28,644 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 89,32,647 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 43,062 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 10,96,651 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 14,24,45,949 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Dunia
Top