Thursday, 03 Dec, 9.51 am ಕನ್ನಡದುನಿಯಾ

ಹೋಮ್
BREAKING NEWS: 95 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ - ಒಂದೇ ದಿನದಲ್ಲಿ 526 ಜನರು ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 35,551 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 95,34,965ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 526 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,38,648ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,22,943 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 89,73,373 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 40,726 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 11,11,698 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 14,35,57,647 ಜನರಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Dunia
Top