ಬೆಂಗಳೂರು: ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ.
2018 ರ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಗೈರಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ನ್ಯಾಯಾಲಯದಿಂದ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ.
2018 ರ ಚುನಾವಣೆಯ ವೇಳೆ ಮತದಾರರಿಗೆ ಅಮಿಷ ಸಂಬಂಧ ಬಾಲಕೃಷ್ಣ ವಿರುದ್ಧ ಕೇಸು ದಾಖಲಾಗಿತ್ತು. ಅಬಕಾರಿ ಕಾಯ್ದೆ ಮತ್ತು ಐಪಿಸಿ ಅಡಿ ಕೇಸು ದಾಖಲಾಗಿದ್ದು, ಕೋರ್ಟ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.

