Dailyhunt Logo
  • Light mode
    Follow system
    Dark mode
    • Play Story
    • App Story
BREAKING: ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

BREAKING: ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರೌಡಿಶೀಟರ್ ನರಸಿಂಹ(39) ಕೊಲೆಯಾದ ರೌಡಿಶೀಟರ್.

ನರಸಿಂಹನ ಮುಖ ಗುರುತು ಸಿಗದಷ್ಟು ಕೊಚ್ಚಿ ಕೊಲೆ ಮಾಡಲಾಗಿದೆ. ಶಿವಮೊಗ್ಗದ ಗಾಂಧಿಬಜಾರ್ ಕರಿದೇವರ ಕೇರಿಯಲ್ಲಿ ಘಟನೆ ನಡೆದಿದೆ.

ನರಸಿಂಹ ಶಿವಮೊಗ್ಗದ ಗೋವಿಂದಪುರದ ಆಶ್ರಯ ಬಡಾವಣೆ ನಿವಾಸಿಯಾಗಿದ್ದಾನೆ. ರೌಡಿಶೀಟರ್ ನರಸಿಂಹನ ಮೇಲೆ ದಾಳಿ ಮಾಡಿರುವ ದುಷ್ಕರ್ಮಿಗಳು ಕೈಗಳನ್ನು ಕತ್ತರಿಸಿದ್ದಾರೆ. ನರಸಿಂಹನ ಮುಖ ಗುರುತು ಸಿಗದಷ್ಟು ಕೊಚ್ಚಿ ಹತ್ಯೆ ಮಾಡಲಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ನರಸಿಂಹನ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಎ.ಜಿ. ಕಾರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia