Dailyhunt Logo
  • Light mode
    Follow system
    Dark mode
    • Play Story
    • App Story
BREAKING: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಕಾಮುಕರು ಅಂದರ್ !

BREAKING: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಕಾಮುಕರು ಅಂದರ್ !

ಬಿಹಾರದ ಜಮುಯಿ ಜಿಲ್ಲೆಯ ಮಡ್ವಾ ಪಹಾಡ್ ಸಮೀಪ 10ನೇ ತರಗತಿಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ, ದೈಹಿಕವಾಗಿ ಹಲ್ಲೆ ನಡೆಸಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆಘಾತಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಂತ್ರಸ್ತರ ದೂರಿನನ್ವಯ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದು, ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿದ್ದಾರೆ.

ಶನಿವಾರ ಸಂಜೆ ಸುಮಾರು 6:30 ರ ಸುಮಾರಿಗೆ ಕೋಚಿಂಗ್ ಮುಗಿಸಿಕೊಂಡು ಸ್ಕೂಟರ್‌ನಲ್ಲಿ ಮನೆಗೆ ಮರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿಗಳನ್ನು ಜಮುಯಿ-ಲಖಿಸರಾಯ್ ಮುಖ್ಯ ರಸ್ತೆಯಿಂದ 3 ಕಿಮೀ ದೂರದ ನಿರ್ಜನ ಪ್ರದೇಶದಲ್ಲಿ ಗುಂಪೊಂದು ತಡೆದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಿಡಿಗೇಡಿಗಳು, ಬಾಲಕನ ಕಾಲರ್ ಹಿಡಿದು ಎಳೆದಾಡಿದ್ದಾರೆ ಹಾಗೂ ಬಾಲಕಿಯ ಕುತ್ತಿಗೆಯನ್ನು ಹಿಡಿದು ಮೇಲಕ್ಕೆತ್ತಿ ಅಮಾನವೀಯವಾಗಿ ವರ್ತಿಸಿದ್ದಾರೆ. ಬಾಲಕಿಯನ್ನು ರಕ್ಷಿಸಲು ಯುವಕ ಮಧ್ಯಪ್ರವೇಶಿಸಿದಾಗ ಆಕೆಯ ಮೇಲೆ ಅನುಚಿತವಾಗಿ ಕೈಹಾಕಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ತಾವು ಇನ್ನು ಮುಂದೆ ಇಲ್ಲಿಗೆ ಬರುವುದಿಲ್ಲ, ಬಿಟ್ಟುಬಿಡಿ ಎಂದು ವಿದ್ಯಾರ್ಥಿಗಳು ಕಣ್ಣೀರಿಟ್ಟು ಕೈಮುಗಿದರೂ ಬಲವಂತವಾಗಿ ಕ್ಷಮೆ ಕೇಳಿಸಿ, ಇಡೀ ಕೃತ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಳ್ಳಲಾಗಿತ್ತು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ ಎಚ್ಚೆತ್ತ ಹಿರಿಯ ಪೊಲೀಸ್ ಅಧಿಕಾರಿಗಳು ಜಮುಯಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಹಾಗೂ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ. ಜಮುಯಿ ಎಸ್‌ಡಿಪಿಒ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ಈಗಾಗಲೇ 17-18 ವರ್ಷ ಪ್ರಾಯದ ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಉಳಿದ 7 ರಿಂದ 8 ಮಂದಿ ಆರೋಪಿಗಳನ್ನು ಗುರುತಿಸಲಾಗಿದ್ದು, ಅವರ ಹಿನ್ನೆಲೆ ಪರಿಶೀಲಿಸಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.

ಮತ್ತೊಂದೆಡೆ, ಸಂತ್ರಸ್ತ ಅಪ್ರಾಪ್ತರ ಗುರುತು ಮತ್ತು ಮುಖ ಕಾಣುವಂತೆ ವಿಡಿಯೋ ಪ್ರಸಾರ ಮಾಡಿದ 32 ಸಾಮಾಜಿಕ ಮಾಧ್ಯಮ ಖಾತೆಗಳ (13 ಫೇಸ್‌ಬುಕ್, 12 ಇನ್‌ಸ್ಟಾಗ್ರಾಮ್ ಹಾಗೂ 7 ಎಕ್ಸ್ ಖಾತೆಗಳು) ವಿರುದ್ಧವೂ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಪೋಕ್ಸೋ ಮತ್ತು ಬಾಲಾಪರಾಧ ನ್ಯಾಯ ಕಾಯ್ದೆಯನ್ವಯ ಅಪ್ರಾಪ್ತರ ವಿವರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದು ಗಂಭೀರ ಅಪರಾಧ ಎಂದು ಎಚ್ಚರಿಸಲಾಗಿದೆ. ಈ ಘಟನೆಯು ಬಿಹಾರದ ರಾಜಕೀಯ ವಲಯದಲ್ಲೂ ಭಾರಿ ಸಂಚಲನ ಮೂಡಿಸಿದ್ದು, ಮಹಿಳಾ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯ ವೈಫಲ್ಯದ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia