Dailyhunt
'ಬುದ್ಧ ಪೂರ್ಣಿಮೆ' ಪ್ರಯುಕ್ತ ಇಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

'ಬುದ್ಧ ಪೂರ್ಣಿಮೆ' ಪ್ರಯುಕ್ತ ಇಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ಮೇ 1ರ ಶುಕ್ರವಾರದಂದು ಬೆಂಗಳೂರು ನಗರಾದ್ಯಂತ ಮಾಂಸ ಮಾರಾಟವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.

ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆಯನ್ನು ನಿಲ್ಲಿಸುವಂತೆ ಮತ್ತು ಮಾಂಸದ ಅಂಗಡಿಗಳಲ್ಲಿ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸಾರ್ವಜನಿಕರು ಮತ್ತು ವ್ಯಾಪಾರಿಗಳು ಈ ನಿಯಮವನ್ನು ಪಾಲಿಸುವಂತೆ ಪ್ರಾಧಿಕಾರದ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ದಿನಾಂಕ 01-05-2026 ಶುಕ್ರವಾರ “ಬುದ್ಧ ಪೂರ್ಣಿಮಾ” ಇರುವುದರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪ್ರದೇಶ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವುದು ಮತ್ತು ಮಾಂಸ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia