Friday, 07 Aug, 8.42 am ಕನ್ನಡದುನಿಯಾ

ಮನೋರಂಜನೆ
ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಸಂಭ್ರಮದ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ರಾಬರ್ಟ್' ಈ ವೇಳೆಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೋನಾ ಕಾರಣದಿಂದ ಚಿತ್ರ ಬಿಡುಗಡೆ ಮುಂದೂಡಿಕೆಯಾಗಿದೆ.

ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸಲಿರುವ ದರ್ಶನ್, 'ಮಿಲನ' ಪ್ರಕಾಶ್ ನಿರ್ದೇಶನದ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲೇ ದರ್ಶನ್ ಅಭಿನಯದ ಅನೇಕ ಚಿತ್ರಗಳ ಚಿತ್ರೀಕರಣ ಆರಂಭವಾಗಲಿದ್ದು ದರ್ಶನ್ ಪೂರ್ವ ತಯಾರಿ ಮಾಡಿಕೊಂಡಿದ್ದಾರೆ.

'ಮದಕರಿ ನಾಯಕ' ಸೇರಿದಂತೆ ಹಲವಾರು ಚಿತ್ರಗಳು ಶುರುವಾಗಲಿದ್ದು 'ಮಿಲನ' ಪ್ರಕಾಶ್ ನಿರ್ದೇಶನದ ಚಿತ್ರದಲ್ಲಿ ದರ್ಶನ್ ದ್ವಿಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Dunia
Top