Dailyhunt
ಎಸ್.ಎಸ್.ಎಲ್.ಸಿ., ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಎಸ್.ಎಸ್.ಎಲ್.ಸಿ., ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಕೊಪ್ಪಳ: ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಏಪ್ರಿಲ್ 6 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ವಾಕ್ ಇನ್ ಇಂಟರ್‌ವ್ಯೂವನ್ನು ಆಯೋಜಿಸಲಾಗಿದೆ.

ಹೊಸಪೇಟ್ ಸ್ಟೀಲ್ ಲಿಮಿಟೆಡ್ ಸಂಸ್ಥೆಯು ತಮ್ಮಲ್ಲಿ ಖಾಲಿ ಇರುವ ಹೆಲ್ಪರ್ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುವುದು.

‎ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪಾಸ್/ಫೇಲ್ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. ‎

ಆಸಕ್ತ 18 ರಿಂದ 30 ವರ್ಷದೊಳಗಿನ ನಿರುದ್ಯೋಗಿ ಪುರಷರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 2 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ(ರೆಸುಮೆ) ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವ್ ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಉದ್ಯೋಕಾಂಕ್ಷಿಗಳು https://forms.gle/A3GWAYfMgkGWj9KM8 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia