Dailyhunt Logo
  • Light mode
    Follow system
    Dark mode
    • Play Story
    • App Story
ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ

ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ

ಬೆಂಗಳೂರು-: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ₹5.25 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಥೈಲ್ಯಾಂಡ್‌ನ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕನೊಬ್ಬನ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಸುಮಾರು 15 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಅದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಶಪಡಿಸಿಕೊಂಡ ಮಾದಕ ವಸ್ತುವಿನ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು ₹5.25 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಣಿಕನನ್ನು ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act), 1985ರ ಅಡಿಯಲ್ಲಿ ಬಂಧಿಸಲಾಗಿದೆ.

ವಿದೇಶಗಳಿಂದ ಭಾರತಕ್ಕೆ ಮಾದಕ ವಸ್ತುಗಳ ಕಳ್ಳಸಾಗಣೆ ತಡೆಯುವ ನಿಟ್ಟಿನಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮತ್ತು ನಿಗಾ ಕಾರ್ಯಾಚರಣೆಗಳನ್ನು ಮುಂದುವರಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia