Thursday, 29 Oct, 10.09 am ಕನ್ನಡದುನಿಯಾ

ಹೋಮ್
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಅರೆಸ್ಟ್

ತಿರುವನಂತಪುರಂ: ಕೇರಳ ಚಿನ್ನ ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಸ್ಪೆಂಡ್ ಆಗಿದ್ದ ಐಎಎಸ್ ಅಧಿಕಾರಿ ಎಂ. ಶಿವಶಂಕರ್ ಅವರನ್ನು ಬಂಧಿಸಲಾಗಿದೆ.

ಕೇರಳ ಹೈಕೋರ್ಟ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಈ ಪ್ರಕರಣದ ತನಿಖೆ ಕೈಗೊಂಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಿವಶಂಕರ್ ಅವರನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಳ್ಳಲಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿಯಾಗಿ ಶಿವಶಂಕರ್ ಕಾರ್ಯ ನಿರ್ವಹಿಸುತ್ತಿದ್ದರು. ಅವರನ್ನು ಸಸ್ಪೆಂಡ್ ಮಾಡಲಾಗಿತ್ತು.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Dunia
Top