Dailyhunt Logo
  • Light mode
    Follow system
    Dark mode
    • Play Story
    • App Story
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ: ರಾಜ್ಯದ ಜನತೆಗೆ ಮಹತ್ವದ ಸಂದೇಶ ನೀಡಿದ ಸಿಎಂ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ: ರಾಜ್ಯದ ಜನತೆಗೆ ಮಹತ್ವದ ಸಂದೇಶ ನೀಡಿದ ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬಂದು ಇಂದಿಗೆ ಮೂರು ವರ್ಷ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಜನತೆಯೊಂದಿಇಗೆ​​ ಮಹತ್ವದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷ ಪೂರೈಸಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ನಾಡಿನ 1.2+ ಕೋಟಿ ಕುಟುಂಬಗಳ ಒಡತಿಯರಿಗೆ ಈ ಯೋಜನೆಯು ಆರ್ಥಿಕ ಬಲದ ಜೊತೆಗೆ, ಸ್ವಾಭಿಮಾನ ಹಾಗೂ ಆತ್ಮಸ್ಥೈರ್ಯವನ್ನೂ ತುಂಬಿದೆ. ಇದು ಕೇವಲ ಒಂದು ಸರ್ಕಾರಿ ಸೌಲಭ್ಯವಲ್ಲ, ಮಹಿಳೆಯರ ನೆಮ್ಮದಿಯ ಬದುಕಿಗೆ ಸರ್ಕಾರವು ನೀಡುತ್ತಿರುವ ಪ್ರೀತಿಯ ಆಸರೆಯಾಗಿದೆ ಎಂದಿದ್ದಾರೆ.

​ಇದೇ ವೇಳೆ ಫಲಾನುಭವಿಗಳಲ್ಲಿ ಒಂದು ಸಣ್ಣ ಮನವಿ. ಸರ್ಕಾರದ 'ಗ್ಯಾರಂಟಿ ಸಮಿತಿ'ಯವರು ನಿಮ್ಮ ಮನೆ ಬಾಗಿಲಿಗೆ ಬಂದಾಗ, ದಯವಿಟ್ಟು ಅವರಿಗೆ ಬೇಕಾದ ದಾಖಲೆಗಳನ್ನು ನೀಡಿ ಎಂದಿನಂತೆ ಪ್ರೀತಿಯಿಂದ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia