ಡೆಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಲೀಗ್ ಹಂತದ 14ನೇ ಪಂದ್ಯ ನಡೆಯುತ್ತಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆರಿಸಿಕೊಂಡಿದ್ದು, ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಟೂರ್ನಿಯಲ್ಲಿ ಉಭಯ ತಂಡಗಳು ಇಲ್ಲಿಯವರೆಗೂ ತಲಾ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ಕಂಡಿದ್ದರೆ, ಗುಜರಾತ್ ಟೈಟನ್ಸ್ ಎರಡೂ ಪಂದ್ಯಗಳಲ್ಲಿ ಸೋಲನ್ನು ಕಂಡಿದೆ.
ಗುಜರಾತ್ ಟೈಟನ್ಸ್ ಆಡುವ ಬಳಗ: ಶುಬ್ಮನ್ ಗಿಲ್ (ನಾಯಕ), ಸಾಯಿ ಸುಧರ್ಸನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಶಾರುಖ್ ಖಾನ್, ರಾಹುಲ್ ತೇವತಿಯಾ, ರಾಶಿದ್ ಖಾನ್, ಕಗಿಸೋ ರಬಾಡ, ಮೊಹಮ್ಮದ್ ಸಿರಾಜ್, ಅಶೋಕ್ ಶರ್ಮಾ
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಪತುಮ್ ನಿಸ್ಸಾಂಕಾ, ನಿತೀಶ್ ರಾಣಾ, ವಿಪ್ರಜ್ ನಿಗಮ್, ಅಕ್ಷರ್ ಪಟೇಲ್ (ನಾಯಕ), ಡೇವಿಡ್ ಮಿಲ್ಲರ್, ಟ್ರಿಸ್ಟನ್ ಸ್ಟಬ್ಸ್, ಕುಲದೀಪ್ ಯಾದವ್, ಲುಂಗಿ ನ್ಗಿಡಿ, ಟಿ. ನಟರಾಜನ್, ಮುಕೇಶ್ ಕುಮಾರ್

