Dailyhunt Logo
  • Light mode
    Follow system
    Dark mode
    • Play Story
    • App Story
ಜುಲೈ 10ರಂದು ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ

ಜುಲೈ 10ರಂದು ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯು ಜುಲೈ 10ರಂದು ನಡೆಯುವ ಸಾಧ್ಯತೆ ದಟ್ಟವಾಗಿದೆ. ಈ ಪ್ರಕ್ರಿಯೆಯು ಇದೀಗ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮತ್ತು ಚಟುವಟಿಕೆಗಳಿಗೆ ಕಾರಣವಾಗಿದೆ.

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಬಿಎಲ್‍ಓ (BLO) ಮತ್ತು ಬಿಎಲ್‍ಎ (BLA) ಅಧಿಕಾರಿಗಳು ಈ ತಿಂಗಳಾಂತ್ಯದವರೆಗೆ ಮನೆಮನೆ ಭೇಟಿ ಕೈಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಸಚಿವರು ಹಾಗೂ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲೇ ಉಳಿದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

​ಮುಖ್ಯವಾಗಿ, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಎಲ್ಲಾ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಬೇಕಿರುವುದರಿಂದ, ಅದಕ್ಕೂ ಮುನ್ನವೇ ಸಂಪುಟ ಪುನಾರಚನೆಯಾಗಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಎದುರಾಗಿದೆ.

ಚುನಾವಣಾ ಆಯೋಗವು ಆಗಸ್ಟ್ 5ರಂದು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಿದ್ದು, ಆ ನಂತರ ಮಳೆಗಾಲದ ವಿಧಾನಮಂಡಲ ಅಧಿವೇಶನವನ್ನು ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಅಧಿವೇಶನಕ್ಕೂ ಮುನ್ನವೇ ಸಂಪುಟವನ್ನು ಪೂರ್ಣ ಪ್ರಮಾಣದಲ್ಲಿ ವಿಸ್ತರಿಸುವ ಇರಾದೆಯನ್ನು ಹೈಕಮಾಂಡ್ ಹೊಂದಿದೆ.

ಸಂಪುಟ ವಿಸ್ತರಣೆಯ ಸುಳಿವು ಸಿಗುತ್ತಿದ್ದಂತೆಯೇ, ಆಕಾಂಕ್ಷಿಗಳು ತಮ್ಮ ಪ್ರಯತ್ನವನ್ನು ತೀವ್ರಗೊಳಿಸಿದ್ದಾರೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಪಿ.ಎಂ. ಅಶೋಕ್, ಎ.ಎಸ್. ಪೊನ್ನಣ್ಣ, ಕೆ.ಎನ್. ರಾಜಣ್ಣ ಹಾಗೂ ಎಂ.ಆರ್. ಸೀತಾರಾಮ್ ಸೇರಿದಂತೆ ಹಲವು ನಾಯಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮಂಡಿಸಿದ್ದಾರೆ.

​ಇತ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರು ಜುಲೈ 6ರಂದು ವಿದೇಶ ಪ್ರವಾಸದಿಂದ ಮರಳಲಿದ್ದು, ಜುಲೈ 7 ಅಥವಾ 8ರಂದು ರಾಜ್ಯದ ಪ್ರಮುಖ ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಅಂತಿಮ ಚರ್ಚೆ ನಡೆಸಲಿದ್ದಾರೆ.

ಹೈಕಮಾಂಡ್ ಹಸಿರು ನಿಶಾನೆ ತೋರಿದರೆ, ಜುಲೈ 10ರ ಶುಕ್ರವಾರದಂದು ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ. ಜುಲೈ 14ರಿಂದ ಆಷಾಢ ಮಾಸ ಆರಂಭವಾಗುತ್ತಿದ್ದು, ಅದಕ್ಕೂ ಮುನ್ನವೇ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಾಯಕರು ಸಿದ್ಧತೆ ನಡೆಸಿದ್ದಾರೆ.

ಜುಲೈ 14ರಿಂದ ಆಷಾಢ ಆರಂಭವಾಗಲಿದ್ದು, ಆಗಸ್ಟ್ 12ರ ವರೆಗೂ ಮುಂದುವರಿಯಲಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಂಗವಾಗಿ ಬಿಎಲ್‍ಓ ಮತ್ತು ಬಿಎಲ್‍ಎಗಳು ಈ ತಿಂಗಳ ಅಂತ್ಯದವರೆಗೂ ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಅದಕ್ಕಾಗಿ ಎಲ್ಲಾ ಸಚಿವರು, ಶಾಸಕರು ತಮ ಕ್ಷೆ?ತ್ರಗಳಲ್ಲೆ? ಇರಬೇಕು ಎಂದು ಸೂಚನೆ ನೀಡಲಾಗಿದೆ. ಎಸ್‍ಐಆರ್ ಕಾರಣಕ್ಕಾಗಿ ವಿಧಾನಮಂಡಲದ ಅಧಿವೇಶನವನ್ನು ಮುಂದೂಡಲಾಗಿದೆ.

ಸಂಪುಟ ವಿಸ್ತರಣೆಯಾಗಲಿದೆ ಎಂಬ ಸುಳಿವು ದೊರೆಯುತ್ತಿದ್ದಂತೆ ಆಕಾಂಕ್ಷಿಗಳು ಲಾಬಿ ತೀವ್ರಗೊಳಿಸಿದ್ದಾರೆ. ನಿನ್ನೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಪಿ.ಎಂ. ಅಶೋಕ್, ಎ.ಎಸ್. ಪೊನ್ನಣ್ಣ, ಕೆ.ಎನ್.ರಾಜಣ್ಣ, ಎಂ.ಆರ್. ಸೀತಾರಾಮ್ ಮತ್ತಿತರರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಡ ಹೇರಿದ್ದಾರೆ.

ಇತ್ತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಒಂದೆಡೆ ಮುಖಂಡರು ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದರೆ, ಮತ್ತೊಂದು ಕಡೆ ಆಕಾಂಕ್ಷಿಗಳು ಹಿರಿಯ ನಾಯಕರ ಬೆನ್ನಿಗೆ ಬಿದ್ದು ಅವಕಾಶಕ್ಕಾಗಿ ಒತ್ತಡ ಹೇರುತ್ತಿದ್ದಾರೆ.

ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಜುಲೈ 6ರಂದು ಐಲ್ಯಾರ್ಂಡ್ ಪ್ರವಾಸದಿಂದ ಮರಳುವ ಸಾಧ್ಯತೆ ಇದೆ. ಜುಲೈ 7 ಅಥವಾ 8ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಹೈಕಮಾಂಡ್ ಸಮತಿ ನೀಡಿದರೆ ಜುಲೈ 12ರ ರೊಳಗೆ ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ. ಮೂಲಗಳ ಪ್ರಕಾರ ಜುಲೈ 10 ರಂದು ಶುಕ್ರವಾರ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ ಎಂದು ತಿಳಿದು ಬಂದಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia