Monday, 21 Sep, 10.14 am ಕನ್ನಡದುನಿಯಾ

ಹೋಮ್
ಕಳೆದ 24 ಗಂಟೆಯಲ್ಲಿ 1,130 ಜನರು ಕೊರೊನಾ ಗೆ ಬಲಿ: ದೇಶದಲ್ಲಿದೆ 10,03,299 ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 86,961 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 54,87,581 ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,130 ಜನರು ಬಲಿಯಾಗಿದ್ದಾರೆ. ಈ ಮೂಲಕ ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 87,882ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 10,03,299 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 43,96,399 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 7,31,534 ಜನರಲ್ಲಿ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಈ ವರೆಗೆ 6,43,92,594 ಜನರಲ್ಲಿ ಕೊವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Dunia
Top