ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕಪಾಳಕ್ಕೆ ಹೊಡೆದ ಪರಿಣಾಮ ಕುಸಿದು ಬಿದ್ದು ಯುವಕ ಸಾವನ್ನಪ್ಪಿದ್ದಾನೆ.
ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಉಡಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಪಾಳಕ್ಕೆ ಹೊಡೆದಿದ್ದಕ್ಕೆ ಕುಸಿದು ಬಿದ್ದು ಭಾಗ್ಯವಂತ(24) ಮೃತಪಟ್ಟಿದ್ದಾನೆ.
ಆರೋಪಿ ನಬೀಮ್ ನನ್ನು ಸೇಡಂ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಓವರ್ ಟೇಕ್ ಮಾಡುವ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿತ್ತು. ಮಾತಿಗೆ ಮಾತು ಬೆಳೆದಾಗ ಭಾಗ್ಯವಂತ ಶರ್ಟ್ ಕಾಲರ್ ಹಿಡಿದಿದ್ದರಿಂದ ನಬೀಮ್ ಕಪಾಳಕ್ಕೆ ಹೊಡೆದಿದ್ದಾನೆ. ಕೆನ್ನೆಗೆ ಹೊಡೆಯುತ್ತಿದ್ದಂತೆ ಕುಸಿದು ಬಿದ್ದು ಭಾಗ್ಯವಂತ ಸಾವನ್ನಪ್ಪಿದ್ದಾನೆ. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

