Dailyhunt
ಮಾನವ -ವನ್ಯಜೀವಿ ಸಂಘರ್ಷ ತಡೆಗೆ ಸಂತಾನ ಶಕ್ತಿ ಹರಣಕ್ಕೆ ಚಿಂತನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ಮಾನವ -ವನ್ಯಜೀವಿ ಸಂಘರ್ಷ ತಡೆಗೆ ಸಂತಾನ ಶಕ್ತಿ ಹರಣಕ್ಕೆ ಚಿಂತನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಮಾನವ ವನ್ಯಜೀವಿ ಸಂಘರ್ಷ ಹೆಚ್ಚಳವಾಗುತ್ತಿದ್ದು, ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಕುರಿತು ಚಿಂತನೆ ಅಗತ್ಯವಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ನಡೆಯಬೇಕಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೆಲವು ಆಯ್ದ ವನ್ಯಜೀವಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಇವುಗಳ ಸಂಖ್ಯೆಗೆ ಕಡಿವಾಣ ಹಾಕುವ ಅಗತ್ಯವು ಕಂಡು ಬರುತ್ತದೆ. ವನ್ಯಜೀವಿಗಳ ಸಂರಕ್ಷಣೆಯಾಗಬೇಕು. ಅಮೂಲ್ಯ ಜೀವಹಾನಿ ತಪ್ಪಬೇಕು. ಮಾನವನ ಜೀವ ಉಳಿಸುವ ಕೆಲಸವಾಗಬೇಕಿದೆ. ಇದು ನಿರ್ಧಾರವಲ್ಲ, ಒಂದು ಚಿಂತನೆ ಮಾತ್ರವಾಗಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಜೊತೆಗೆ ಈ ಕುರಿತಾದ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದ್ದು, ತಜ್ಞರು, ಕಾನೂನು ಪರಿಣಿತರೊಂದಿಗೆ ಚರ್ಚಿಸಿ ಕೋರ್ಟ್ ಗೆ ಪ್ರಸ್ತಾವನೆ ಸಲ್ಲಿಸುವ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕಾಗುತ್ತದೆ. ಜೀವನೋಪಾಯ ಇರಬೇಕು. ಯಾವ ಭಾಗದಲ್ಲಿ ಯಾವ ವನ್ಯಜೀವಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತದೆಯೋ ಅಲ್ಲಿ ಒಂದೆರಡು ವರ್ಷ ನಿಯಂತ್ರಣಕ್ಕೆ ಚಿಂತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಸ್ವಯಂ ಇಚ್ಛೆಯಿಂದ ಕಾಡಿನಿಂದ ಹೊರಬರಲು ಇಚ್ಚಿಸುವ ಅರಣ್ಯ ವಾಸಿಗಳ ಸ್ಥಳಾಂತರಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಮೂಲ ಸೌಕರ್ಯವಿಲ್ಲದೆ ಬದುಕುತ್ತಿರುವ ಅರಣ್ಯ ವಾಸಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರಬಹುದು. ಅರಣ್ಯದಲ್ಲಿನ ವಸತಿ ಪ್ರದೇಶ ಸ್ಥಳಾಂತರಿಸುವುದರಿಂದ ವನ್ಯಜೀವಿಗಳ ಆವಾಸ ಸ್ಥಾನ ವಿಸ್ತರಣೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia