ಬೆಂಗಳೂರು ನಗರ ಜಿಲ್ಲೆ : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2026-2027 ರ ಸಾಲಿನ ನೇಕಾರರ ಸಮ್ಮಾನ್ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/- ಗಳ ಆರ್ಥಿಕ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಈ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹರಾಗಿರುವ ಎಲ್ಲಾ ಕೈಮಗ್ಗ ನೇಕಾರರು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಅಡಿಯಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡಿರಬೇಕು.
ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಎಲ್ಲಾ ಅರ್ಹ ಕೈಮಗ್ಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರರು ಮತ್ತು ಕಾರ್ಮಿಕರು ಹಿಂದಿನ ವರ್ಷಗಳಲ್ಲಿ ಯೋಜನೆಯಡಿ ನೋಂದಾಯಿಸಿಕೊಂಡಿದ್ದರೂ ಸಹ 2026-27ನೇ ಸಾಲಿಗೆ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರರು ಮತ್ತು ಕಾರ್ಮಿಕರು ಸಹ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಲು ಪರಿಷ್ಕೃತ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಎಸ್.ಜೆ.ಪಿ. ಕಾಲೇಜು ಆವರಣ, ಐ.ಟಿ. ಬ್ಲಾಕ್ ಹತ್ತಿರ, ಕೆ.ಆರ್. ಸರ್ಕಲ್, ಬೆಂಗಳೂರು ಇಲ್ಲಿ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ಜುಲೈ 22 ರೊಳಗಾಗಿ ಮರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080.22341176 ಅಥವಾ ddbloreurban@gmail.com ಅನ್ನು ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯಿತಿ,ಬೆಂಗಳೂರು ನಗರ ಜಿಲ್ಲೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

