Wednesday, 20 Nov, 7.55 am ಕನ್ನಡದುನಿಯಾ

ಹೋಮ್
'ಪದವಿ' ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಕಾಲೇಜು ಶಿಕ್ಷಣ ಇಲಾಖೆ 'ಮೈತ್ರಿ' ಎಂಬ ಸಹಾಯ ವಾಣಿಯನ್ನು ಆರಂಭಿಸಲು ಕ್ರಮ ಕೈಗೊಂಡಿದೆ.

ವಿದ್ಯಾರ್ಥಿಗಳು ಮೂಲಭೂತ ಸೌಕರ್ಯ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಮೈತ್ರಿ ಸಹಾಯವಾಣಿ ಟೋಲ್ ಫ್ರೀ ಸಂಖ್ಯೆ 1800-425-6718 ಗೆ ಕರೆಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ.

ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೆ ಮೈತ್ರಿ ಸಹಾಯವಾಣಿ ಸಿಬ್ಬಂದಿ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಲಿದ್ದು, ಆ ಬಳಿಕ ಬರುವ ಕರೆಗಳನ್ನು ರೆಕಾರ್ಡ್ ಮಾಡಿಕೊಳ್ಳಲಾಗುತ್ತದೆ. ಮರುದಿನ ಈ ಕರೆಗಳನ್ನು ಪರಿಶೀಲಿಸಿ ಸಿಬ್ಬಂದಿ ವಾಪಸ್ ಕರೆ ಮಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸುತ್ತಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Dunia
Top