Dailyhunt Logo
  • Light mode
    Follow system
    Dark mode
    • Play Story
    • App Story
ಪ್ರಥಮ ಪಿಯುಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟ

ಪ್ರಥಮ ಪಿಯುಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟ

ಬೆಂಗಳೂರು: ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ. ಪ್ರಥಮ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ. ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯು ಮುಂಬರುವ ವಾರ್ಷಿಕ ಮತ್ತು ಪೂರಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫೆಬ್ರವರಿ 10, 2027ರಿಂದ ಆರಂಭವಾಗಿ ಫೆಬ್ರವರಿ 23ರ ವರೆಗೆ ನಡೆಯಲಿದೆ.

ಪರೀಕ್ಷಾ ಸಮಯ: ಸಂಗೀತ ಮತ್ತು ಎನ್‌ಎಸ್‌ಕ್ಯೂಎಫ್ (NSQF) ವಿಷಯಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಮುಖ್ಯ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜರುಗಲಿವೆ.

ಪೂರಕ ಪರೀಕ್ಷೆ (Supplementary): ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ಅಥವಾ ಗೈರುಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮೇ 18ರಿಂದ ಮೇ 31ರ ವರೆಗೆ ಪೂರಕ ಪರೀಕ್ಷೆಗಳನ್ನು ನಡೆಸಲು ಇಲಾಖೆ ನಿರ್ಧರಿಸಿದೆ.

ಆಕ್ಷೇಪಣೆ ಸಲ್ಲಿಸಲು ಅವಕಾಶ: ಸದ್ಯ ಪ್ರಕಟವಾಗಿರುವುದು ಕೇವಲ ತಾತ್ಕಾಲಿಕ ವೇಳಾಪಟ್ಟಿಯಾಗಿದೆ. ಈ ದಿನಾಂಕಗಳ ಕುರಿತು ವಿದ್ಯಾರ್ಥಿಗಳು, ಪೋಷಕರು ಅಥವಾ ಶಿಕ್ಷಕರಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 30ರ ಒಳಗಾಗಿ ಇಲಾಖೆಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ ಬಳಿಕ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಷಯವಾರು ವೇಳಾಪಟ್ಟಿ

ದಿನಾಂಕ ಬೆಳಗಿನ ಅವಧಿ (ಬೆಳಗ್ಗೆ 10:00 ರಿಂದ ಮಧ್ಯಾಹ್ನ 1:00) ಮಧ್ಯಾಹ್ನದ ಅವಧಿ (ಮಧ್ಯಾಹ್ನ 2:00 ರಿಂದ ಸಂಜೆ 4:15)

ಫೆಬ್ರವರಿ 10 ಕನ್ನಡ, ಅರೇಬಿಕ್‌ –

ಫೆಬ್ರವರಿ 11 ಹಿಂದಿ –

ಫೆಬ್ರವರಿ 12 ಇಂಗ್ಲಿಷ್‌ –

ಫೆಬ್ರವರಿ 13 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌ ಸಂಗೀತ ಅಥವಾ ಎನ್‌ಎಸ್‌ಕ್ಯೂಎಫ್‌ (NSQF) ವಿಷಯಗಳು

ಫೆಬ್ರವರಿ 15 ಭೂಗೋಳಶಾಸ್ತ್ರ, ಭೌತಶಾಸ್ತ್ರ –

ಫೆಬ್ರವರಿ 16 ಇತಿಹಾಸ, ಗಣಕ ವಿಜ್ಞಾನ –

ಫೆಬ್ರವರಿ 17 ರಸಾಯನಶಾಸ್ತ್ರ, ಮೂಲಗಣಿತ –

ಫೆಬ್ರವರಿ 18 ವ್ಯವಹಾರ ಅಧ್ಯಯನ, ಮನಃಶಾಸ್ತ್ರ, ಶಿಕ್ಷಣಶಾಸ್ತ್ರ –

ಫೆಬ್ರವರಿ 19 ಸಮಾಜಶಾಸ್ತ್ರ, ಗಣಿತ, ಗೃಹ ವಿಜ್ಞಾನ –

ಫೆಬ್ರವರಿ 20 ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ, ವಿದ್ಯುನ್ಮಾನಶಾಸ್ತ್ರ –

ಫೆಬ್ರವರಿ 22 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ –

ಫೆಬ್ರವರಿ 23 ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ –

ವಿದ್ಯಾರ್ಥಿಗಳು ಈ ತಾತ್ಕಾಲಿಕ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು, ಈಗಿನಿಂದಲೇ ಪರೀಕ್ಷಾ ಸಿದ್ಧತೆಗಳನ್ನು ನಡೆಸುವುದು ಉತ್ತಮ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia