Dailyhunt
ಪ್ರೀತಿ ವಿಚಾರ ಕುಟುಂಬದವರಿಗೆ ತಿಳಿಸಿದ್ದಕ್ಕೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರೀತಿ ವಿಚಾರ ಕುಟುಂಬದವರಿಗೆ ತಿಳಿಸಿದ್ದಕ್ಕೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಯಾದಗಿರಿ: ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಯಾದಗಿರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದು, ಮಹಿಳಾ ಠಾಣೆ ಪೊಲೀಸರು ಶನಿವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಸಪ್ಪ(25), ರಡ್ಡೆಪ್ಪ(30) ಬಂಧಿತ ಆರೋಪಿಗಳು. ಶುಕ್ರವಾರ ಸಂಜೆ ಬಯಲು ಬಹಿರ್ದೆಸೆಗೆ ತೆರಳಿ ಮನೆಗೆ ವಾಪಸ್ ಆಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿದ ಬಸಪ್ಪ, ನಿನ್ನ ನಾದಿನಿ ಜೊತೆ ಪ್ರೀತಿಸುತ್ತಿರುವ ವಿಚಾರವನ್ನು ಕುಟುಂಬದವರಿಗೆ ಏಕೆ ಹೇಳಿದ್ದೆ ಎಂದು ಮಹಿಳೆಯನ್ನು ಪ್ರಶ್ನಿಸಿ ಬೆದರಿಸಿ ಎಳೆದೊಯ್ದಿದ್ದಾನೆ.

ಸ್ಥಳಕ್ಕೆ ರಡ್ಡೆಪ್ಪನನ್ನು ಕರೆಸಿಕೊಂಡಿದ್ದು, ನಂತರ ಇಬ್ಬರೂ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದದಾರೆ. ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಮಹಿಳಾ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಶನಿವಾರ ಬಂಧಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia