Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯ ರಾಜಕಾರಣದಲ್ಲಿ 'ಅಚ್ಚರಿ'ಗೆ ಕಾರಣವಾಗಿದೆ ಕುಮಾರಸ್ವಾಮಿ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ 'ಅಚ್ಚರಿ'ಗೆ ಕಾರಣವಾಗಿದೆ ಕುಮಾರಸ್ವಾಮಿ ಹೇಳಿಕೆ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಡಿಯೂರಪ್ಪನವರ ಕುರಿತು ಸಾಫ್ಟ್ ಕಾರ್ನರ್ ತೋರಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪ ಚುನಾವಣೆ ಬಳಿಕ ಅಗತ್ಯ ಬಿದ್ದರೆ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುವ ಪರೋಕ್ಷ ಇಂಗಿತ ವ್ಯಕ್ತಪಡಿಸಿದ್ದರು.

ಇದರ ಮಧ್ಯೆ ಅನರ್ಹ ಶಾಸಕರುಗಳು ಪ್ರತಿನಿಧಿಸಿದ್ದ 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಈ ಪೈಕಿ 13 ಕ್ಷೇತ್ರಗಳಲ್ಲಿ ಅನರ್ಹ ಶಾಸಕರೇ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಇವರುಗಳಿಗೆ ಕಾಂಗ್ರೆಸ್, ಜೆಡಿಎಸ್ ಪ್ರಬಲ ಪೈಪೋಟಿ ನೀಡಲು ಸಿದ್ಧತೆ ನಡೆಸುತ್ತಿರುವ ಮಧ್ಯೆ ಕುಮಾರಸ್ವಾಮಿಯವರು ನೀಡಿರುವ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮಗೆ ಅವಕಾಶ ಇರುವ ಕ್ಷೇತ್ರಗಳಲ್ಲಿ ಗೆಲ್ಲುವುದು ನಮ್ಮ ಮೊದಲ ಆದ್ಯತೆ.

ಉಳಿದೆಡೆ ಅನರ್ಹ ಶಾಸಕರನ್ನು ಸೋಲಿಸುವುದೇ ನಮ್ಮ ಗುರಿ ಎಂದಿದ್ದಾರೆ. ಅಂತಹ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಲಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಗೆ ಬೆಂಬಲ ನೀಡುವ ಮುನ್ಸೂಚನೆ ನೀಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia