ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ದಾರರ ಇ-ಕೆವೈಸಿ ಪ್ರಕ್ರಿಯೆ ಆರಂಭಿಸಲು ಆಹಾರ ಇಲಾಖೆ ಸೂಚನೆ ನೀಡಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ಇ-ಕೆವೈಸಿ ಪ್ರಕ್ರಿಯೆ ಪ್ರಾರಂಭಿಸುವಂತೆ ಇಲಾಖೆಯಿಂದ ಸೂಚನೆ ನೀಡಲಾಗಿದ್ದು, ಮಂಗಳವಾರದಿಂದಲೇ ಕೆಲವು ಕಡೆ ಬಿಪಿಎಲ್ ಕಾರ್ಡ್ ದಾರರ ಇ-ಕೆವೈಸಿ ಪ್ರಕ್ರಿಯೆ ಆರಂಭಿಸಲಾಗಿದೆ.
ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವ ಕುಟುಂಬದ ಫಲಾನುಭವಿಗಳು ಬಯೋಮೆಟ್ರಿಕ್, ಆಧಾರ್ ಸಂಖ್ಯೆಯೊಂದಿಗೆ ಇ-ಕೆವೈಸಿ ಮಾಡಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಹೆಚ್ಚಾಗಿದ್ದು, ಮೊದಲು ಇದನ್ನು ಸರಿಪಡಿಸಿ ಕೊಡಬೇಕು. 2017ರಲ್ಲಿ ಇ-ಕೆವೈಸಿ ಮಾಡಿದ 11.50 ಕೋಟಿ ರೂ. ಮೊತ್ತವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಪಡಿತರ ವಿತರಕರ ಸಂಘ ಆಗ್ರಹಿಸಿದೆ.

