Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿ ಜುಲೈ 10ರವರೆಗೆ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಸೂಚನೆ

ರಾಜ್ಯದಲ್ಲಿ ಜುಲೈ 10ರವರೆಗೆ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗಲಿದೆ. ಜುಲೈ 10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಸಿಡಿಲು ಸಹಿತ ಭಾರಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಮತ್ತು ಕೆಲವು ಕಡೆಗಳಲ್ಲಿ ಭಾರಿ ಮಳೆ ಆಗಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜುಲೈ 5 ರಿಂದ 8 ರವರೆಗೆ ಭಾರೀ ಆಗುವ ಸಂಭವವಿದೆ ಎಂದು ಹೇಳಲಾಗಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವ ಇದೆ. ತಗ್ಗು ಪ್ರದೇಶ ಮತ್ತು ಪ್ರವಾಹ ಪೀಡಿತ ಪ್ರದೇಶಗಳ ನಿವಾಸಿಗಳು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಬೆಳಗಾವಿ, ಜಿಲ್ಲೆಯಲ್ಲಿ ಕೂಡ ಭಾರಿ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವ ಇದೆ. ಇನ್ನು ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia