ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಪ್ರಥಮ ಪಿಯುಸಿ ಹಾಗೂ ಸಾಮಾನ್ಯ ಪದವಿ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿಗೆ ಸಾಂದೀಪಿನಿ ಶಿಷ್ಯವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ವಿದ್ಯಾರ್ಥಿಗಳಿಗೆ ವಾರ್ಷಿಕ ನಿರ್ವಹಣಾ ವೆಚ್ಚ ರೂ.
15000/- ಗಳನ್ನು ನೀಡಲಾಗುತ್ತಿದ್ದು, ಸಿಇಟಿ, ನೀಟ್ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ 2/3 ಭಾಗದ ಮೊತ್ತವನ್ನು ಮರುಪಾವತಿ ಮಾಡಲಾಗುವುದು.
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ ಹೊಂದಿರಬೇಕು. ವೃತ್ತಿಪರ ಕೋರ್ಸ್ಗಳಿಗೆ ಮ್ಯಾನೇಜ್‌ಮೆಂಟ್ ಕೋಟಾ ಅಥವಾ ಕಾಮೆಡ್-ಕೆ ಅಡಿಯಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗೆ ಅರ್ಹರಿರುವುದಿಲ್ಲ. ವಿದ್ಯಾರ್ಥಿಗಳ ಆಧಾರ್, ಮೊಬೈಲ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಎನ್‌ಪಿಸಿಐ ಅಡಿಯಲ್ಲಿ ಸೀಡ್ ಆಗಿರಬೇಕು.
ಅರ್ಹ ವಿದ್ಯಾರ್ಥಿಗಳು www.esbdb.karnataka.gov.in ಲಿಂಕ್ ಮೂಲಕ ದಿ: 31/12/2026 ರೊಳಗಾಗಿ ಅರ್ಜಿಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8029605888/ 8762249230 ಗಳನ್ನು ಸಂಪರ್ಕಿಸುವುದು ಹಾಗೂ ಇನ್ಸ್ಟ್ರಾ ಗ್ರಾಂ ಮತ್ತು ಫೇಸ್‌ಬುಕ್ ಮೂಲಕವೂ ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸೆ. 06ಕ್ಕೆ 'ಸ್ಟಡಿ ಅಬ್ರಾಡ್ ಎಕ್ಸ್‌ಪೋ': ವಿದೇಶಿ ಶಿಕ್ಷಣ ಬಯಸುವ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
ಕೆವಿಟಿಎಸ್‌ಡಿಸಿ ನಿಗಮವು ಅಂತರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಸೆ. 06 ರಂದು ಬೆಂಗಳೂರಿನ ಗಾಯತ್ರಿ ವಿಹಾರ ಪ್ಯಾಲೇಸ್ ಗ್ರೌಂಡ್ ನಲ್ಲಿ ವಿದೇಶದಲ್ಲಿ ಅಧ್ಯಯನ -ಸ್ಟಡಿ ಅಬ್ರಾಡ್ ಎಕ್ಸ್ ಪೋ ಮಾಹಿತಿ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಕಾರ್ಯಕ್ರಮದಲ್ಲಿ 60 ಕ್ಕೂ ಹೆಚ್ಚು ವಿದೇಶಿ ವಿಶ್ವವಿದ್ಯಾಲಯಗಳು ಭಾಗವಹಿಸುತ್ತಿದ್ದು, ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಿದೇಶಿ ಅಧ್ಯಯನದ ಅವಕಾಶಗಳು, ಪ್ರವೇಶ ಪ್ರಕ್ರಿಯೆ, ವಿದ್ಯಾರ್ಥಿ ವೀಸಾ ಮಾಹಿತಿ ಮತ್ತು ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಒಂದೇ ವೇದಿಕೆಯಡಿ ಒದಗಿಸುವ ಅವಕಾಶವನ್ನು ಕಲ್ಪಿಸಲಾಗಿದೆ.
ಆಸಕ್ತರು www.studyabroad.ksdckarnataka.com ವೆಬ್‌ಸೈಟ್ ಮೂಲಕ ನೊಂದಾಯಿಸಿಕೊಂಡು ಮಾಹಿತಿ ಶಿಬಿರದಲ್ಲಿ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅಶೋಕ ಎಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

