Dailyhunt
'ರಾಣ' ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್

'ರಾಣ' ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್

ನಂದಕಿಶೋರ್ ನಿರ್ದೇಶನದ ಶ್ರೇಯಸ್ ನಟನೆಯ 'ರಾಣ' ಚಿತ್ರದ ಫಸ್ಟ್ ಲುಕ್ ಟೀಸರ್ ವೊಂದನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ.

ನಟ ಶ್ರೇಯಸ್ ಲುಕ್ ಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ. ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ನಟನೆಯ ಬಹುನಿರೀಕ್ಷಿತ ಸಿನಿಮಾ ಇದಾಗಿದ್ದು, ರಿಯಲ್ ಸ್ಟಾರ್ ಉಪೇಂದ್ರ ಫಸ್ಟ್ ಲುಕ್ ಟೀಸರ್ ಅನ್ನು ಲಾಂಚ್ ಮಾಡುವ ಮೂಲಕ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ಸೆಪ್ಟೆಂಬರ್ 23ರಿಂದ ಪ್ರಧಾನಿ ಮೋದಿ ಅಮೆರಿಕ ಪ್ರವಾಸ; ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

ಈ ಸಿನಿಮಾದಲ್ಲಿ ರೇಶ್ಮಾ ನಾಣಯ್ಯ ನಾಯಕಿಯಾಗಿ ನಟಿಸಿದ್ದು ಈ ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ನೀಡುತ್ತಿದ್ದಾರೆ. ಗುಜ್ಜಲ್ ಪುರುಷೋತ್ತಮ್ ತಮ್ಮ ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia