Dailyhunt Logo
  • Light mode
    Follow system
    Dark mode
    • Play Story
    • App Story
ರಾತ್ರಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಮುಳುಗಡೆ, 8 ಮಂದಿ ರಕ್ಷಣೆ

ರಾತ್ರಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಮುಳುಗಡೆ, 8 ಮಂದಿ ರಕ್ಷಣೆ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ತಳಭಾಗದ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗುತ್ತಿದ್ದ ಎಂಟು ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಬಂಧಿಸಿದ್ದಾರೆ.

ಇಂಡಿಯನ್ ಕೋಸ್ಟ್ ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಟು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ಉಡುಪಿ ಮಲ್ಪೆಯ ಸೌಪರ್ಣಿಕಾ ಹೆಸರಿನ ಬೋಟ್ ಭಾನುವಾರ ಮೀನುಗಾರಿಕೆಗೆ ತೆರಳಿದೆ.

ಕಾರವಾರ ಭಾಗದಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ತಳಭಾಗದಲ್ಲಿ ಫೈಬರ್ ಒಡೆದು ಬೋಟ್ ಮುಳುಗುವ ಹಂತಕ್ಕೆ ತಲುಪಿದೆ. ಮೀನುಗಾರರು ರಕ್ಷಣೆಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್ ಗಾರ್ಡ್ ಸಿಬ್ಬಂದಿ ಎಂಟು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia