Thursday, 16 Sep, 3.58 pm ಕನ್ನಡದುನಿಯಾ

ಹೋಮ್
ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ತಂದೆ-ಮಗಳ ದಾರುಣ ಸಾವು

ಕೋಲಾರ: ಕೆಎಸ್‌ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸಂಭವಿಸಿದ ಸರಣಿ ಅಪಘಾತದಲ್ಲಿ ತಂದೆ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರ ಜಿಲ್ಲೆ ಚಿಂತಾಮಣಿಯಲ್ಲಿ ಸಂಭವಿಸಿದೆ.

ಮೊದಲು ಟಾಟಾಏಸ್ ವಾಹನಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್ ಬಳಿಕ ಎದುರುಗಡೆಯಿಂದ ಬರುತ್ತಿದ್ದ ಬೈಕಿಗೆ ಗುದ್ದಿ ನಂತರ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ತಂದೆ ಹಾಗೂ ಮಗಳು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿದ್ದು, ಬಸ್ ನಲ್ಲಿದ್ದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Dunia
Top