Dailyhunt
ಸರ್ಕಾರಿ ನೌಕರರ ಮುಷ್ಕರ ಎಫೆಕ್ಟ್: SSLC ಪರೀಕ್ಷೆ ಮುಂದೂಡಿಕೆ

ಸರ್ಕಾರಿ ನೌಕರರ ಮುಷ್ಕರ ಎಫೆಕ್ಟ್: SSLC ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮುಷ್ಕರ ಪರಿಣಾಮ ಇಂದು ನಡೆಯಬೇಕಿದ್ದ ಎಸ್‌ಎಸ್‌ಎಲ್ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿದೆ.

ಇಂದು ನಡೆಯಬೇಕಿದ್ದ ಎಸ್‌ಎಸ್‌ಎಲ್ಸಿ ತೃತೀಯ ಭಾಷೆ ಹಿಂದಿ ವಿಷಯದ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಮಾರ್ಚ್ 6 ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ಈ ಮೂಲಕ ಎಸ್‌ಎಸ್‌ಎಲ್ಸಿ ಪೂರ್ವಭಾವಿ ಪರೀಕ್ಷೆಗೂ ಮುಷ್ಕರದ ಬಿಸಿ ತಟ್ಟಿದೆ. ಕರ್ತವ್ಯಕ್ಕೆ ಗೈರು ಹಾಜರಾಗಲು ಪ್ರೌಢಶಾಲಾ ಶಿಕ್ಷಕರ ಸಂಘ ತೀರ್ಮಾನಿಸಿದೆ. ಇಂದು ಕರ್ತವ್ಯಕ್ಕೆ 80,000 ಪ್ರೌಢಶಾಲೆ ಶಿಕ್ಷಕರು ಗೈರು ಹಾಜರಾಗಿದ್ದಾರೆ. ಹೀಗಾಗಿ ಇಂದು ನಡೆಯಬೇಕಿದ್ದ ಹಿಂದಿ ವಿಷಯದ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿದೆ ಎನ್ನಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia