Dailyhunt Logo
  • Light mode
    Follow system
    Dark mode
    • Play Story
    • App Story
Scholarship : ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Scholarship : ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಳ್ಳಾರಿ: ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟಿನ https://ssp.postmatric.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.ಬಳ್ಳಾರಿ ತಾಲ್ಲೂಕಿನ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.ಏನಾದರೂ ತಾಂತ್ರಿಕ ತೊಂದರೆಗಳಾದಲ್ಲಿ ಎಸ್‌ಎಸ್‌ಪಿ ಸಹಾಯವಾಣಿ ಸಂಖ್ಯೆ 080-22261789 ಗೆ ಕರೆ ಮಾಡಬಹುದು.ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜು.05 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-25 ಹಾಗೂ ಎಫ್-46 ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 05 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

*ವಿದ್ಯುತ್ ವ್ಯತ್ಯಯವಾಗುವ ಏರಿಯಾಗಳು

ಆರ್.ಕೆ ಮಿಲ್ ರೋಡ್, ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟಾö್ಯಂಡ್, ದೊಡ್ಡ ಹಾಗೂ ಸಣ್ಣ ಮಾರ್ಕೆಟ್, ಕಾರ್ಕಳ ತೋಟ, ಸಾಯಿ ಕಾಲೋನಿ, ಆರ್.ಆರ್. ಲೇಔಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಇಂಡಸ್ಟ್ರಿಯಲ್ ಏರಿಯಾ ಹಂತ-1 ಸೇರಿದಂತೆ ಇನ್ನೂ ಮುಂತಾದ ಏರಿಯಾಗಳು. ಹಾಗಾಗಿ ಸಾರ್ವಜನಿಕರು, ವಿದ್ಯುತ್ ಗ್ರಾಹಕರು ಜೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia