Dailyhunt Logo
  • Light mode
    Follow system
    Dark mode
    • Play Story
    • App Story
SHOCKING: ಹುಡುಗಿ ಬಾಯಿಗೆ ಬಟ್ಟೆ ತುರುಕಿ ಸಾಮೂಹಿಕ ಅತ್ಯಾಚಾರ

SHOCKING: ಹುಡುಗಿ ಬಾಯಿಗೆ ಬಟ್ಟೆ ತುರುಕಿ ಸಾಮೂಹಿಕ ಅತ್ಯಾಚಾರ

ಬರೇಲಿ: ಉತ್ತರ ಪ್ರದೇಶದಲ್ಲಿ ಇಬ್ಬರು ಯುವಕರು ಭಾನುವಾರ ಸಂಜೆ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ತನ್ನ ಮನೆಯಿಂದ ಹೊರಬಂದಿದ್ದ ಬಾಲಕಿಯನ್ನು ಎಳೆದೊಯ್ದು ದೌರ್ಜನ್ಯವೆಸಗಿದ್ದಾರೆ.

ಈ ಘಟನೆ ಗುನ್ನೌರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯು ಆಕೆಯ ಬಾಯಿಗೆ ಬಟ್ಟೆಯನ್ನು ತುರುಕಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ ಎಂದು ಸಂತ್ರಸ್ಥೆ ಕುಟುಂಬ ಆರೋಪಿಸಿದೆ. ಇಬ್ಬರು ಯುವಕರು ಹುಡುಗಿಯ ಮೇಲೆ ಬಲವಂತ ಮಾಡಲು ಪ್ರಯತ್ನಿಸುತ್ತಿರುವುದನ್ನು ಒಬ್ಬ ಹುಡುಗ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ವರದಿಯ ಪ್ರಕಾರ, ಯುವಕರು ಅದೇ ಗ್ರಾಮದ ನಿವಾಸಿಗಳಾಗಿದ್ದಾರೆ. ಇಬ್ಬರು ಆರೋಪಿಗಳು ಆಕೆಯ ಕುಟುಂಬದ ಸದಸ್ಯರನ್ನು ಬೆದರಿಸಿದ್ದಾರೆ. ಬಾಲಕಿಯ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದಾಗ ಆರೋಪಿಗಳು ತಮ್ಮ ಪಿಸ್ತೂಲ್ ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಸಂಭಾಲ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಎಎಸ್ಪಿ) ಅಲೋಕ್ ಕುಮಾರ್ ಜೈಸ್ವಾಲ್ ತಿಳಿಸಿದ್ದು, ಕುಟುಂಬದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಯುವಕರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 ಡಿ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಗುನ್ನೌರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia