Monday, 09 Sep, 6.21 pm ಕನ್ನಡದುನಿಯಾ

ಕರ್ನಾಟಕ
ತಿಮ್ಮಪ್ಪನ ಭಕ್ತರಿಗೆ ಶುಭ ಸುದ್ದಿ: ಶಿವಮೊಗ್ಗದಿಂದ ತಿರುಪತಿಗೆ ರೈಲು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಶಿವಮೊಗ್ಗ‌ ಜಿಲ್ಲೆಯ. ವಿವಿಧ ರೈಲ್ವೇ ಯೋಜನಗೆಳು ಮತ್ತು ಬೆಂಗಳೂರು ಸಬರ್ಬನ್ ರೈಲು ಹಾಗು ಮೆಟ್ರೋ ರೈಲುಗಳ ಕಾಮಗಾರಿ ಮತ್ತು ಯೋಜನೆಗಳ ಬಗ್ಗೆ ಕೇಂದ್ರ ಮಂತ್ರಿ ಸುರೇಶ್ ಅಂಗಡಿ ಹಾಗೂ ಇತರೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.

ಶಿವಮೊಗ್ಗ ಔಟರ್ ರಿಂಗ್ ರಸ್ತೆ ಸಮೀಪ ರಸ್ತೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಜಾಗ ನೀಡಲು ಒಪ್ಪಿಗೆ ನೀಡಲಾಗಿದೆ. ಶಿವಮೊಗ್ಗ - ಶಿಕಾರಿಪುರ - ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ ಆರಂಭಿಕ ಕೆಲಸಕ್ಕೆ ಸಭೆ ಒಪ್ಪಿದೆ. ಶಿವಮೊಗ್ಗ - ಯಶವಂತಪುರ ಇಂಟರ್ ಸಿಟಿ ರೈಲು ಸಂಚಾರ ಚೆನ್ನೈವರೆಗೆ ವಿಸ್ತರಣೆಗೆ ತಾತ್ವಿಕ ಒಪ್ಪಿಗೆ ದೊರೆತಿದೆ.

ಶಿವಮೊಗ್ಗ - ತಿರುಪತಿ ರೈಲು ಬೀರೂರು, ಚಿತ್ರದುರ್ಗ, ಬಳ್ಳಾರಿ ಮಾರ್ಗದಲ್ಲಿ ಸಂಚರಿಸಲು ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಶಿವಮೊಗ್ಗ ಮತ್ರು ಯಶವಂತಪುರ ನಡುವೆ ಸಂಚಾರ ಮಾಡುವ ಶತಾಬ್ದಿ ರೈಲಿನ ಸಮಯ ಬದಲಾವಣೆ ಕುರಿತು ಚರ್ಚಿಸಲಾಗಿದೆ. ಬೀರೂರು - ಶಿವಮೊಗ್ಗ ರೈಲು ಮಾರ್ಗದ ಡಬ್ಲಿಂಗ್ ಕಾಮಗಾರಿ ಸಧ್ಯದಲ್ಲೇ ಆರಂಭಿಸಲು ಸೂಚನೆ ನೀಡಲಾಗಿದೆ.

ಅಲ್ಲದೇ, ಬೆಂಗಳೂರು ಸಬರ್ಬನ್ ರೈಲು ಯೋಜನೆ ಬಗ್ಗೆ ಚರ್ಚೆ ನಡೆಸಲಾಗಿದೆ. ಮೆಟ್ರೋ ಕಾಮಗಾರಿಗಳಿಗೆ ರೈಲ್ವೆ ಇಲಾಖೆಯು ಸಹಕರಿಸುವಂತೆ ಮನವಿ ಮಾಡಲಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Dunia
Top