ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜಲಾಶಯದಲ್ಲಿ ಪ್ರಸ್ತುತ ಎಫ್ ಆರ್ ಎಲ್ ಮಟ್ಟದಲ್ಲಿ ನೀರು ಸಂಗ್ರಹವಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಅದೇ ರೀತಿ,ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ ಹಾಗೂ ತುಂಗಾ ಅಣೆಕಟ್ಟು ಕಾಲುವೆಗಳಲ್ಲಿ ಜನ ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ ಮಾತ್ರ ಸೀಮಿತವಾಗಿ ನೀರನ್ನು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ, ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಮೈಸೂರಿನ ಸಿಪೆಟ್ ಸಂಸ್ಥೆಯಲ್ಲಿ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ 2026-27ನೇ ಸಾಲಿನ ಡಿಪ್ಲೊಮಾ ಕೋರ್ಸ್ ಪ್ರವೇಶ ಪ್ರಾರಂಭವಾಗಿದ್ದು, ಐಟಿಐ, ಪಿಯುಸಿ (ವಿಜ್ಞಾನ) ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ ಸ್ಕೀಮ್ ಮೂಲಕ 2 ನೇ ವರ್ಷ/ 3 ನೇ ಸೆಮಿಸ್ಟರ್ ಗೆ ಡಿಪ್ಲೋಮಾ ಕೋರ್ಸ್ ಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಸಿಪೆಟ್ ವಿದ್ಯಾರ್ಥಿಗಳು ಪಾಲಿಮರ್/ ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಸಂಬಂಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಈ ವೃತ್ತಿಪರ ಡಿಪ್ಲೋಮಾ ದ ಕೊನೆಯ ಸೆಮಿಸ್ಟರ್ ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ. ಸೀಮಿತ ಸಂಖ್ಯೆಯ ಸೀಟುಗಳು ಮಾತ್ರ ಲಭ್ಯವಿವೆ. ಹೆಚ್ಚಿನ ಮಾಹಿತಿಗೆ ದೂ. ಸಂ. 8124489163 /0821-2516322 ಸಂಪರ್ಕಿಸಬಹುದೆಂದು ಎಂದು ಸಂಸ್ಥೆಯ ಜಂಟಿ ನಿರ್ದೇಶಕರು ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

