Thursday, 04 Mar, 6.31 am ಕನ್ನಡದುನಿಯಾ

ಹೋಮ್
ವಿಧಾನಸೌಧಕ್ಕೆ CITU ಮುತ್ತಿಗೆ, ಬೆಂಗಳೂರಲ್ಲಿಂದು ಬೃಹತ್ ಪ್ರತಿಭಟನೆ: ಟ್ರಾಫಿಕ್ ಜಾಮ್ ಸಾಧ್ಯತೆ

ಬೆಂಗಳೂರು: ಸಿಐಟಿಯು ನೇತೃತ್ವದಲ್ಲಿ ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಸುಮಾರು 25,000 ನೌಕರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.

ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು, ಸಾರಿಗೆ ನೌಕರರಿಂದ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.

ಕೆಎಸ್ಸಾರ್ ರೈಲ್ವೇ ನಿಲ್ದಾಣದಿಂದ ವಿಧಾನಸೌಧದವರೆಗೆ ಮೆರವಣಿಗೆ ನಡೆಯಲಿದೆ. ರ್ಯಾಲಿಯ ಮೂಲಕ ಬಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು, ಬೃಹತ್ ರ್ಯಾಲಿ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Dunia
Top