Dailyhunt Logo
  • Light mode
    Follow system
    Dark mode
    • Play Story
    • App Story
ಯಶವಂತಪುರ ಶಾಸಕರ ಫೋಟೋ ಹಿಡಿದು SIR: ಮತ್ತೊಂದು ಅಕ್ರಮದ ವಿಡಿಯೋ ಬಿಡುಗಡೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

ಯಶವಂತಪುರ ಶಾಸಕರ ಫೋಟೋ ಹಿಡಿದು SIR: ಮತ್ತೊಂದು ಅಕ್ರಮದ ವಿಡಿಯೋ ಬಿಡುಗಡೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಶ ಪರೀಷ್ಕರಣೆ ಎಸ್​ಐಆರ್​ ಪ್ರಕ್ರಿಯೆ ಆರಂಭವಾಗಿದ್ದು, ಹಲವೆಡೆ ಅಕ್ರಮ ನಡೆಯುತ್ತಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.,ಕುಮರಸ್ವಾಮಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.

ರಾಮನಗರದಲ್ಲಿ ಎಸ್ ಐರ್ ಅಕ್ರಮ ಆರೋಪ ಸಂಬಂಧ ನಿನ್ನೆಯಷ್ಟೇ ವಿಡಿಯೋ ಸಾಕ್ಷಿ ಸಮೇತ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್​​.ಡಿ.

ಕುಮಾರಸ್ವಾಮಿ ಇಂದು ಮತ್ತೊಂದು ವಿಡಿಯೋ ರಿಲೀಸ್​ ಮಾಡಿದ್ದಾರೆ. ಯಶವಂತಪುರ ಶಾಸಕ ಎಸ್​.ಟಿ.ಸೋಮಶೇಖರ್​​ ಫೋಟೋ ಇರುವ ಪುಸ್ತಕಗಳನ್ನು ಬಿಎಲ್​​ಒಗಳು ಹಿಡಿದು ಎಸ್ ಐಆರ್ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ಸರ್ಕಾರದ ಗುಲಾಮರಾಗಿ ಕೆಲಸ ಮಾಡಲು‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೆಪಿಸಿಸಿ ಹೊಸ ಅಧ್ಯಕ್ಷರು ರಾಮಮಂದಿರ ಬಗ್ಗೆ ಮಾತನಾಡುತ್ತಾರೆ. ಆದರೆ ಮತದಾರರ ಹುಂಡಿಯನ್ನೇ ಲೂಟಿ ಮಾಡಲು ಸರ್ಕಾರ ಹೊರಟಿದೆ. ಆ ಮೂಲಕ ಸಂವಿಧಾನವನ್ನ ಬುಡಮೇಲು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ನನಗೆ ರಾಜ್ಯದ ಹಲವು ಭಾಗಗಳಿಂದ ಕರೆ ಬರುತ್ತಿದ್ದು, ಕೇಂದ್ರದ ಚುನಾವಣಾ ಆಯುಕ್ತರ ಭೇಟಿಗೆ ಸಮಯ ಕೇಳುತ್ತೇನೆ. ರಾಜ್ಯ ಚುನಾವಣಾ ಆಯುಕ್ತರನ್ನ ಇಂದು ಭೇಟಿ ಮಾಡುತ್ತೇವೆ. ರಾಜ್ಯ ಸರ್ಕಾರ ಯಾವ ಸಾಧನೆ ಮಾಡಲು ಹೊರಟಿದೆ ಎಂದವರು ಪ್ರಶ್ನಿಸಿದ್ದಾರೆ.

ಇನ್ನು ಭಾರತೀಯ ಚುನಾವಣಾ ಆಯೋಗದ (ECI) ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಖಡಕ್​​ ಆದೇಶದ ಬಗ್ಗೆಯೂ ಪ್ರತಕ್ರಿಯಿಸಿರುವ ಹೆಚ್​​ಡಿಕೆ, ಅನ್ಬುಕುಮಾರ್ ಕಚೇರಿಯಲ್ಲಿ ಕುಳಿತು ಹೇಳಿದ್ರೆ ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾವು ನೀಡಿರುವ ದೂರಿನ ಬಗ್ಗೆ ಏನು ಕ್ರಮ ಆಗಿದೆ? ಬೆಳಿಗ್ಗೆಯಿಂದ ಆಯುಕ್ತರು ಕಚೇರಿಗೇ ಬಂದಿಲ್ಲ ಎಂದದು ಕಿಡಿಕಾರಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia