Thursday, 22 Apr, 6.26 am Kannada News Now

ಭಾರತ
18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೋವಿಡ್ -19 ಲಸಿಕೆ ಘೋಷಿಸಿದ ಮಧ್ಯಪ್ರದೇಶ, ಅಸ್ಸಾಂ ಸರ್ಕಾರ

ಭೋಪಾಲ್: ಮೇ 1 ರಿಂದ ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮಧ್ಯಪ್ರದೇಶ ಸರ್ಕಾರ ಬುಧವಾರ ಘೋಷಿಸಿದೆ.

ಮಧ್ಯಪ್ರದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ.

ಕೊರೋನಾ ವೈರಸ್ ಚೈನ್ ಬ್ರೇಕ್ ಮಾಡಲು ಏಪ್ರಿಲ್ 30 ರವರೆಗೆ ಜನರು ತಮ್ಮ ತಮ್ಮ ಪ್ರದೇಶಗಳಲ್ಲಿಯೇ ಜನತಾ ಕರ್ಫ್ಯೂ(ಸಾರ್ವಜನಿಕ ಕರ್ಫ್ಯೂ) ವಿಧಿಸಿಕೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ.

ಇನ್ನು ಅಸ್ಸಾಂ ಸರ್ಕಾರ ಸಹ ಮೇ 1 ರಿಂದ 18 ರಿಂದ 45 ವರ್ಷದ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಿದೆ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಹೇಳಿದ್ದಾರೆ. ಕೋವಿಡ್ ನಿರ್ವಹಣೆಗಾಗಿ ಕಳೆದ ವರ್ಷ ಪಡೆದ ದೇಣಿಗೆಗಳನ್ನು ಕೋವಿಡ್ ಲಸಿಕೆ ಖರೀದಿಗಾಗಿ ಬಳಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top