ಯಾದಗಿರಿ : ಕೋವಿಡ್-19ರ ಸಾಂಕ್ರಾಮಿಕ ರೋಗ ನಿರ್ವಾಹಣೆಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಅಧೀನ ಸಂಸ್ಥೆಗಳಲ್ಲಿ ಖಾಲಿ ಇರುವ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ ಸೇರಿದಂತೆ ಒಟ್ಟು 45 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶುಶ್ರೂಷಕರು-18 ಹುದ್ದೆಗಳಿಗೆ ಮಾಸಿಕ ವೇತನ 25,000 ರೂ., ಪ್ರಯೋಗಶಾಲಾ ತಂತ್ರಜ್ಞರು-11 ಹುದ್ದೆಗಳಿಗೆ 20,000 ರೂ., ಫಾರ್ಮಾಸಿಸ್ಟ್-16 ಹುದ್ದೆಗಳಿಗೆ 20,000 ರೂ. ವೇತನ ಇರುತ್ತದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ ಇವುಗಳಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುವುದು.

