Monday, 25 Jan, 9.41 am Kannada News Now

ಭಾರತ
ಅಪ್ರಾಪ್ತೆ ಬಟ್ಟೆ ಧರಿಸಿದ್ದಾಗ ಅಂಗಗಳನ್ನು ಸ್ಪರ್ಶಿಸಿದರೆ ಲೈಂಗಿಕ ದೌರ್ಜನ್ಯ ಎನಿಸುವುದಿಲ್ಲ : ಬಾಂಬೆ ಹೈಕೋರ್ಟ್​ ತೀರ್ಪು

ಮುಂಬೈ: ವ್ಯಕ್ತಿಯೊಬ್ಬ ಅಪ್ರಾಪ್ತೆ ಬಟ್ಟೆ ಧರಿಸಿದ್ದಾಗ ಆಕೆಯ ಅಂಗಗಳನ್ನು ಸ್ಪರ್ಶಿಸಿದರೆ ಅದು ಲೈಂಗಿಕ ದೌರ್ಜನ್ಯವಲ್ಲ ಎಂದು ಬಾಂಬೆ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.

ಪ್ರಕರಣವೊಂದರ ತನಿಖೆ ನಡೆಸುತ್ತಿದ್ದ ಬಾಂಬೆ ಹೈಕೋರ್ಟ್ ಕೇವಲ ದೇಹವನ್ನು ಸವರುವುದು ಲೈಂಗಿಕ ದೌರ್ಜನ್ಯ ಎನಿಸಿಕೊಳ್ಳುವುದಿಲ್ಲ. ಲೈಂಗಿಕ ಉದ್ದೇಶದಿಂದ ನೇರವಾಗಿ ದೇಹಸಂಪರ್ಕ ಮಾಡುವುದು, ಚರ್ಮದಿಂದ ಚರ್ಮಕ್ಕೆ ಸ್ಪರ್ಶ ಇದ್ದರೆ ಲೈಂಗಿಕ ದೌರ್ಜನ್ಯ ಎನಿಸಿಕೊಳ್ಳುವುದು ಎಂದು ಬಾಂಬೇ ಹೈಕೋರ್ಟ್​ನ ನಾಗ್ಪುರ ಪೀಠ​ ತೀರ್ಪು ನೀಡಿದೆ.

ಶಾಕಿಂಗ್ : ಮೂಢನಂಬಿಕೆಗೆ ದಾಸರಾಗಿ ಹೆತ್ತ ಮಕ್ಕಳನ್ನೇ ಕೊಲೆ ಮಾಡಿದ ತಂದೆ -ತಾಯಿ

ಒಬ್ಬ ಅಪ್ರಾಪ್ತೆ ಬಟ್ಟೆ ಧರಿಸಿಕೊಂಡಿದ್ದಾಗ ಆಕೆಯ ಎದೆಯನ್ನು ಮುಟ್ಟಿದರೆ ಅಥವಾ ಕೈ ಎದೆಗೆ ತಾಗಿದ ತಕ್ಷಣ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆತ ಅಪ್ರಾಪ್ತೆ ಧರಿಸಿದ್ದ ಬಟ್ಟೆಯನ್ನು ತೆಗೆದು ಸ್ಪರ್ಶಿಸಿದರೆ ಅಥವಾ ಬಟ್ಟೆಯೊಳಗಿಂದ ಕೈ ಹಾಕಿದರೆ ಅದನ್ನು ಲೈಂಗಿಕ ದೌರ್ಜನ್ಯ ಎನ್ನಬಹುದು.

ಇಂತಹ ಪ್ರಕರಣವನ್ನು ಐಪಿಸಿ ಸೆಕ್ಷನ್ 354ರ ಅಡಿ ಪ್ರಕರಣ ದಾಖಲಿಸಬಹುದು ಎಂದು ಅಪ್ರಾಪ್ತೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿಯ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶೆ ಪುಷ್ಪಾ ಗನೇಡಿವಾಲಾ ಹೇಳಿದರು. ಪ್ರಸ್ತುತ ಪ್ರಕರಣದಲ್ಲಿ ಆರೋಪಿ ಬಾಲಕಿಯ ಬಟ್ಟೆ ತೆಗೆದಿರಲಿಲ್ಲ. ಹಾಗಾಗಿ ಈ ಪ್ರಕರಣ ಪೋಕ್ಸೋ ಕಾಯ್ದೆಯಡಿ ಬರುವುದಿಲ್ಲ. ಈ ಪ್ರಕರಣಕ್ಕೆ ಐಪಿಸಿ ಸೆಕ್ಷನ್ 354 (ಮಹಿಳೆಯ ಘನತೆಗೆ ಕುಂದು ತರುವುದು) ಅನ್ವಯ ಆಗುತ್ತದೆ ಎಂದು ನ್ಯಾಯಾಧೀಶೆ ಪುಷ್ಪಾ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/367sVuW



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top