ಹೋಮ್
ಬಾಗಲಕೋಟೆ ಜಿಲ್ಲೆಯಲ್ಲಿ ಬೈಕ್- ಕಾರು ಸರಣಿ ಅಪಘಾತ : ಸ್ಥಳದಲ್ಲೇ ನಾಲ್ವರ ದುರ್ಮರಣ

ಬಾಗಲಕೋಟೆ : ಎರಡು ಬೈಕ್ ಗಳಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದ ಬಳಿ ನಡೆದಿದೆ.
ಮೃತರನ್ನು ಹನುಮಂತ ಕಾಂಬಳೆ (38) ಅಮೋಘಿ ಡವಳೇಶ್ವರ (26) ಮಹದೇವ ಬಿದರಿ (26) ಮಹದೇವ ತಾಯಿ ಯಮನವ್ವ ಬಿದರಿ (58) ಎಂದು ಗುರುತಿಸಲಾಗಿದೆ.
ಜಮಖಂಡಿಯಿಂದ ವಿಜಯಪುರಕ್ಕೆ ಹೊರಟಿದ್ದ ಕಾರು ಜಮಖಂಡಿ ವಿಜಯಪುರ ಮಾರ್ಗದಲ್ಲಿ ಒಂದು ಬೈಕ್ ಗೆ ಡಿಕ್ಕಿ ಹೊಡೆದು , ಮತ್ತೆ ಅದೇ ಮಾರ್ಗದಲ್ಲಿ ನೂರು ಮೀಟರ್ ದೂರದಲ್ಲಿ ಮತ್ತೊಂದು ಬೈಕ್ ಗೆ ಡಿಕ್ಕಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದು, ಘಟನೆ ನಡೆದ ಸ್ಥಳಕ್ಕೆ ಜಮಖಂಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
'FDA' ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಸಿಸಿಬಿಯಿಂದ ಮತ್ತೋರ್ವ ಆರೋಪಿ ಅರೆಸ್ಟ್
BREAKING : ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್ : ಮತ್ತೋರ್ವ ಆರೋಪಿ ಅರೆಸ್ಟ್
ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್ ಸೇರಿಕೊಳ್ಳಿ
https://bit.ly/363lK75
Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now