ಕರ್ನಾಟಕ
ಬಾಗಲಕೋಟೆಯಲ್ಲಿ ಭೀಕರ ಅಪಘಾತದಲ್ಲಿ ಹೊತ್ತಿ ಉರಿದ ಮಿನಿ ಬಸ್ : ಇಬ್ಬರು ಮಹಿಳೆಯರು ಸಜೀವ ದಹನ

ಬಾಗಲಕೋಟೆ : ಮಿನಿ ಲಕ್ಸುರಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿದ ಪರಿಣಾಮ ಇಬ್ಬರು ಮಹಿಳೆಯರು ಸಜೀವ ದಹನವಾಗಿರುವ ಘಟನೆ ಮುಧೋಳ ತಾಲೂಕಿನ ಉತ್ತೂರು ಗ್ರಾಮದ ಬಳಿ ನಡೆದಿದೆ.
ಯಾದವಾಡದ ಈರವ್ವ ಗಾಣಿಗೇರ (70) ಹಾಗೂ ಅಣ್ಣವ್ವ ಗಾಣಿಗೇರ (58) ಮೃತ ದುರ್ದೈವಿಗಳು. ಘಟನೆಯಲ್ಲಿ 11 ಜನರು ಗಾಯಗೊಂಡಿದ್ದು, ಅವರನ್ನು ಮುಧೋಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಜಿಲ್ಲೆ ಯಾದವಾಡ ಪಟ್ಟಣದ ಜನರು ಅಥಣಿ ತಾಲೂಕಿನ ಚಮಕೇರಿ ಗ್ರಾಮಕ್ಕೆ ತೆರಳಿದ್ದರು. ಮದುವೆ ಮುಗಿಸಿಕೊಂಡು ವಾಪಸ್ ಉತ್ತೂರು ಗ್ರಾಮದ ಮೂಲಕ ಯಾದವಾಡಕ್ಕೆ ಸಂಜೆ 6 ಗಂಟೆಗೆ ಹೊರಡಲಾಗಿತ್ತು. ಈ ವೇಳೆ ಟ್ರ್ಯಾಕ್ಟರ್ ಗೆ ಓವರ್ ಟೇಕ್ ಮಾಡುವುದಕ್ಕೆ ಹೋಗಿ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಬಸ್ ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಸ್ಪರ್ಶಿಸಿ ಹೊತ್ತಿ ಉರಿದಿದೆ ಎನ್ನಲಾಗಿದೆ. ಘಟನೆ ಸಂಬಂಧ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.