ಬೆಂಗಳೂರು : ಬೆಡ್ ಬ್ಲಾಕಿಂಗ್ ಹಗರಣ ಬಯಲಾದ ಬೆನ್ನಲ್ಲೇ ದಕ್ಷಿಣ ವಲಯದ ವಾರ್ ರೂಂ ನ 17 ಮಂದಿ ಗುತ್ತಿಗೆ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಲಾಗಿದೆ.
ಈ ಸಂಬಂಧ ಮಾಹಿತಿ ನೀಡಿರುವ ಬಿಬಿಎಂಪಿ ವಿಶೇಷ ಆಯುಕ್ತೆ ತುಳಸಿ ಮುದ್ದಿನೇನಿ, ಸಂಸದ ತೇಜಸ್ವಿ ಸೂರ್ಯ ಓದಿದ ಪಟ್ಟಿಯಲ್ಲಿದ್ದ ಎಲ್ಲರನ್ನು ಅಮಾನತು ಮಾಡಲಾಗಿದೆ. ಕೆಲಸಕ್ಕೆ ಬರುವುದು ಬೇಡ ಎಂದು ಹೇಳಲಾಗಿದೆ. ಉಳಿದ ತನಿಖೆಯನ್ನು ಪೊಲೀಸರು ಮಾಡಲಿದ್ದಾರೆ. ಆ ವರದಿಯ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ಬೆಡ್ ಬ್ಲಾಕಿಂಗ್ ಹಗರಣದ ಸಂಬಂಧ ಸಿಸಿಬಿ ತನಿಖೆ ಚುರುಕುಗೊಳಿಸಲಾಗಿದ್ದು, ಈಗಾಗಲೇ ಒಟ್ಟು 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

