ಭಾರತ
ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ನೆಮ್ಮದಿಯ ಸುದ್ದಿ ಕೇಂದ್ರ ಸಚಿವ : ಮಾರ್ಚ್ ವೇಳೆಗೆ ದೇಶಾದ್ಯಂತ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಕೆ!

ನವದೆಹಲಿ: ಮಾರ್ಚ್ ಅಥ್ವಾ ಏಪ್ರಿಲ್ ವೇಳೆಗೆ ದೇಶಾದ್ಯಂತ ಪೆಟ್ರೋಲ್, ಡಿಸೇಲ್ ಸೇರಿ ಗ್ಯಾಸ್ ಸಿಲೆಂಡರ್ ಬೆಲೆಯಲ್ಲಿ ಇಳಿಕೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಉಕ್ಕು ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ತೈಲ ಉತ್ಪಾದಿಸುವ ರಾಷ್ಟ್ರಗಳಾದ ರಷ್ಯಾ, ಕತಾರ್ ಮತ್ತು ಕುವೈತ್ ಮೇಲೆ ಭಾರತ ಒತ್ತಡ ಹೇರುತ್ತಿದ್ದು, ಪ್ರತಿ ಬ್ಯಾರೆಲ್ ಇಂಧನ ಬೆಲೆಯೂ ಕಡಿಮೆಯಾಗುವುದರಿಂದ ತೈಲ ಬೆಲೆಯೂ ಕಡಿಮೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ತೈಲ ಉತ್ಪಾದಿಸುವ ಪ್ರಮುಖ ರಾಷ್ಟ್ರಗಳ ಜತೆ ಸಂಪರ್ಕ ಹೊಂದಿರುವುದಾಗಿ ಹೇಳಿದ ಸಚಿವರು, ಈ ದೇಶಗಳಿಂದ ಇಂಧನ ಖರೀದಿಸುವ ಭಾರತದಲ್ಲಿ ತೈಲ ಬೆಲೆ ಇಳಿಕೆಯಾಗುವ ನಿಟ್ಟಿನಲ್ಲಿ ಇಂಧನ ಉತ್ಪಾದನೆಯನ್ನ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ.
ಡೀಸೆಲ್, ಪೆಟ್ರೋಲ್ ಮತ್ತು ಗ್ಯಾಸ್ ಬೆಲೆ ಯಾವಾಗ ಇಳಿಯುತ್ತದೆ ಎಂದು ಯಾರೂ ಊಹಿಸಲು ಸಾಧ್ಯವಿಲ್ಲ ಎಂದಿದ್ದ ಸಚಿವರು, ಮಾರ್ಚ್ ಅಥವಾ ಏಪ್ರಿಲ್ ವೇಳೆಗೆ ಅಡುಗೆ ಅನಿಲ, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಕೆಯಾಗಬಹುದು' ಎಂದು ಹೇಳಿದರು.
ಇಂಧನ ಬೆಲೆ ಗಗನಕ್ಕೇರಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ನಿವಾಸದ ಎದುರು ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆಯನ್ನ ಖಂಡಿಸಿ ನಡೆಸಿದ್ರು. ಸರಕಾರ ಕೂಡಲೇ ದರ ಏರಿಕೆಯನ್ನ ವಾಪಸ್ ಮಾಡಬೇಕು ಎಂದು ಆಗ್ರಹಿಸಿದರು.