Dailyhunt
ಬೆಂಗಳೂರಲ್ಲಿ ಹಾಸ್ಟೆಲ್ ಬಳಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ : 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌, ಇಬ್ಬರು ಅರೆಸ್ಟ್!

ಬೆಂಗಳೂರಲ್ಲಿ ಹಾಸ್ಟೆಲ್ ಬಳಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ : 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌, ಇಬ್ಬರು ಅರೆಸ್ಟ್!

Kannada News Now 6 days ago

ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ, ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್‌ ಎಂದು ಗುರುತಿಸಲಾಗಿದೆ.

ಬಂಧಿತರಿಂದ 10.5 ಲಕ್ಷದ ರೂ. ಮೌಲ್ಯದ 21 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಹಾಸ್ಟೆಲ್‌ ಹಿಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್‌ ಮಾಡಿ, ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದರು.

ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ತಂದು ಇಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಕೇಸ್ ದಾಖಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now