Dailyhunt
ಬೆಂಗಳೂರಿಗರೇ ಗಮನಿಸಿ : ಏ.5ರಂದು 2 ಗಂಟೆಗಳ ಕಾಲ `ನಮ್ಮ ಮೆಟ್ರೋ' ಸೇವೆ ಸ್ಥಗಿತ.!

ಬೆಂಗಳೂರಿಗರೇ ಗಮನಿಸಿ : ಏ.5ರಂದು 2 ಗಂಟೆಗಳ ಕಾಲ `ನಮ್ಮ ಮೆಟ್ರೋ' ಸೇವೆ ಸ್ಥಗಿತ.!

Kannada News Now 2 weeks ago

ಬೆಂಗಳೂರು : ಏಪ್ರಿಲ್ 5 ರ ಭಾನುವಾರ 2 ಗಂಟೆಗಳ ಕಾಲ `ನಮ್ಮ ಮೆಟ್ರೋ' (Namma Metro) ಸೇವೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ ಎಂದು ಬಿಎಂಆರ್‌ಸಿಲ್ (BMRCL) ತಿಳಿಸಿದೆ.

ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ.

ಹೀಗಾಗಿ ಭಾನುವಾರ (ಏ.5ರಂದು) ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಮೆಜೆಸ್ಟಿಕ್‌ನಿಂದ ಮೈಸೂರು ರಸ್ತೆವರೆಗೆ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಕೈಗೊಳ್ಳಲಾಗುತ್ತಿದೆ.

ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 07:00 ರಿಂದ 09:00 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.

ಇತರೆ ಎಲ್ಲಾ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟ ದಿಂದ ಮೈಸೂರು ರಸ್ತೆ; ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ವೈಟೀಲ್ಡ್ (ಕಾಡುಗೋಡಿ); ಮಾದಾವರ ದಿಂದ ರೇಷ್ಮೆ ಸಂಸ್ಥೆ ಮತ್ತು ಆರ್್.ವಿ.ರಸ್ತೆ ಯಿಂದ ಬೊಮ್ಮಸಂದ್ರ ನಡುವಿನ ಮೆಟ್ರೋ ರೈಲು ಸೇವೆಗಳು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಯಿಂದ ವೇಳಾಪಟ್ಟಿಯಂತೆ ಸಂಚರಿಸಲಿವೆ.

ಬೆಳಿಗ್ಗೆ 09:00 ಗಂಟೆಯ ನಂತರ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳು ಎಂದಿನಂತೆ ಸಂಚರಿಸಲಿವೆ.

ನಮ್ಮ ಮೆಟ್ರೋ ಪ್ರಯಾಣಿಕರು ಮೇಲೆ ತಿಳಿಸಿರುವ ಬದಲಾವಣೆಗಳನ್ನು ಗಮನಿಸಿ ಸಹಕರಿಸುವಂತೆ ವಿನಂತಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now