Dailyhunt
ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಏ.5ರಂದು ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಏ.5ರಂದು ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

Kannada News Now 1 week ago

ಬೆಂಗಳೂರು: ನೇರಳೆ ಮಾರ್ಗದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮಜೆಸ್ಟಿಕ್) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಬೆಳಿಗ್ಗೆ 2 ಗಂಟೆಗಳಕಾಲ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತಗೊಳಿಸಲಾಗುತ್ತಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಕೈಗೊಳ್ಳಲಾಗುತ್ತಿದೆ.

ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 07:00 ರಿಂದ 09:00 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.

ಇತರೆ ಎಲ್ಲಾ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟ ದಿಂದ ಮೈಸೂರು ರಸ್ತೆ; ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ವೈಟ್ಫೀಲ್ಡ್ (ಕಾಡುಗೋಡಿ); ಮಾದಾವರ ದಿಂದ ರೇಷ್ಮೆ ಸಂಸ್ಥೆ ಮತ್ತು ಆರ್.ವಿ.ರಸ್ತೆ ಯಿಂದ ಬೊಮ್ಮಸಂದ್ರ ನಡುವಿನ ಮೆಟ್ರೋ ರೈಲು ಸೇವೆಗಳು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಯಿಂದ ವೇಳಾಪಟ್ಟಿಯಂತೆ ಸಂಚರಿಸಲಿವೆ.

ಬೆಳಿಗ್ಗೆ 09:00 ಗಂಟೆಯ ನಂತರ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳು ಎಂದಿನಂತೆ ಸಂಚರಿಸಲಿವೆ ಎಂದಿದೆ.

BREAKING: ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ 'ಗ್ರೀನ್ ಸಿಗ್ನಲ್'

Vastu for Wealth: ನಿಮ್ಮ ಸಾಲಬಾಧೆ ಮುಕ್ತಿಗಾಗಿ 'ವಾಸ್ತು ಟಿಪ್ಸ್': ಲಕ್ಷ್ಮಿಯ ಕೃಪೆ ಪಡೆಯಲು ಇಲ್ಲಿದೆ ಮಾರ್ಗ!

Dailyhunt
Disclaimer: This content has not been generated, created or edited by Dailyhunt. Publisher: Kannada News Now