Saturday, 02 Jan, 12.47 pm Kannada News Now

ಭಾರತ
ಭದ್ರತಾ ಪಡೆ ಗುರಿಯಾಗಿಸಿ ಗ್ರೇನೆಡ್ ದಾಳಿ ನಡೆಸಿದ ಉಗ್ರರು : ನಾಗರೀಕರಿಗೆ ಗಂಭೀರ ಗಾಯ

ಪುಲ್ವಾಮ: ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ಏರಿಕೆಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ 7 ಮಂದಿ ನಾಗರೀಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಪುಲ್ವಾಮ ಜಿಲ್ಲೆಯ ತ್ರಾಲ್ ಬಸ್ ನಿಲ್ದಾಣದ ಬಳಿ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ.

ಈ ವೇಳೆ ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾಗಿರುವ ಉಗ್ರರಿಗಾಗಿ ಪರಿಶೀಲನೆ ನಡೆಯುತ್ತಿದೆ.Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top